ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜರಿಗೆ ಆಳ್ವಾಸ್ ನಿಂದ 2 ಲಕ್ಷ ಪ್ರೋತ್ಸಾಹ ಧನ

|
Google Oneindia Kannada News

ಮಂಗಳೂರು, ಏಪ್ರಿಲ್ 19:ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೂಡಬಿದಿರೆಯ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ 2 ಲಕ್ಷ ಪ್ರೋತ್ಸಾಹ ಧನ ಘೋಷಿಸಲಾಗಿದೆ.

 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿದ್ದರು. ಇದೀಗ ಈ ವಿದ್ಯಾರ್ಥಿನಿಗೆ ಆಳ್ವಾಸ್ ಸಂಸ್ಥೆಯಿಂದ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಘೋಷಿಸಿದ್ದಾರೆ.

Alvas announced cash award for Olvita Dsouza

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತು ಯೋಜನೆಯಡಿ ಉಚಿತ ಶಿಕ್ಷಣ ನೀಡುವುದಲ್ಲದೆ ಅತ್ಯುತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಾ ಬಂದಿದೆ. ಈ ಹಿಂದೆಯೂ ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಂಸ್ಥೆಯ ಹಳೆ ವಿದ್ಯಾರ್ಥಿಗಳಿಗೆ, ಪ್ರಶಸ್ತಿ ವಿಜೇತರಿಗೆ ಹಾಗೂ ಕ್ರೀಡಾರಂಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೂ ಪ್ರೋತ್ಸಾಹಧನ ನೀಡಲಾಗಿದೆ ಎಂದು ಮೋಹನ್ ಆಳ್ವ ತಿಳಿಸಿದ್ದಾರೆ.

English summary
Olvita Ancil Dsouza from Alvas college Moodbidre topped in PU exam. President of Alvas educational institution Dr.Mohan Alva announced 2 lkh rupees for her achievement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X