ಏಷ್ಯನ್ ಬಾಸ್ಕೆಟ್ ಬಾಲ್: ಕನ್ನಡತಿ ಬಾಂಧವ್ಯ ಭಾರತ ತಂಡದ ನಾಯಕಿ!
ಹಲವು ಅಂತರಾಷ್ಟ್ರೀಯ ಬಾಸ್ಕೆಟ್ಬಾಲ್ ನಲ್ಲಿ ಭಾರತ ಪರ ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಬಾಂಧವ್ಯ ಎಚ್.ಎಂ ಅವರು ಮಹಿಳಾ ಫಿಬಾ ಜೂನಿಯರ್ ಬಾಸ್ಕೆಟ್ಬಾಲ್ ಚಾಂಪಿಯನ್ ಶಿಪ್ನ ಭಾರತದ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು, ನವೆಂಬರ್. 03 : 23ನೇ ಮಹಿಳಾ ಫಿಬಾ ಏಷ್ಯನ್ ಜೂನಿಯರ್ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಟೂರ್ನಿಗೆ ಭಾರತದ ತಂಡದ ನಾಯಕಿಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಾಂಧವ್ಯ ಎಚ್. ಎಂ. ಆಯ್ಕೆಯಾಗಿದ್ದಾರೆ.
ನವೆಂಬರ್ 11ರಿಂದ ಥಾಯ್ಲೆಂಡ್ ನ ಬ್ಯಾಂಕಾಕ್ನಲ್ಲಿ ಆರಂಭವಾಗಲಿರುವ 23ನೇ ಫಿಬಾ ಏಷ್ಯನ್ ಜೂನಿಯರ್ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ನಲ್ಲಿ ಭಾರತ ತಂಡವನ್ನು ಕನ್ನಡತಿ ಬಾಂಧವ್ಯ ಮುನ್ನಡೆಸಲಿದ್ದಾರೆ. [ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ದಾರುಣ್ ರಿಯೋಗೆ ಅರ್ಹತೆ]

ಭಾರತದ ತಂಡದ ನಾಯಕಿಯಾಗಿ ಆಯ್ಕೆಯಾಗಿರುವ ಈ ಹಿಂದೆ 2013ರಲ್ಲಿ ಬಾಂಧವ್ಯ ಕೊಲೊಂಬೋದಲ್ಲಿ ಜರುಗಿದ ಏಷ್ಯನ್ ಯೂತ್ ಬಾಸ್ಕೆಟ್ ಬಾಲ್ , 2014ರಲ್ಲಿ ಜೋರ್ಡನ್ನಲ್ಲಿ ನಡೆದ ಜೂನಿಯರ್ ಏಷ್ಯನ್ ಬಾಸ್ಕೆಟ್ ಬಾಲ್ ಹಾಗೂ 2015ರಲ್ಲಿ ಚೀನಾದಲ್ಲಿ ಜರುಗಿದ ಸೀನಿಯರ್ ಏಷ್ಯನ್ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ನಲ್ಲಿ ಬಾಂಧವ್ಯ ಎಚ್ . ಎಂ. ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ಭಾಂಧವ್ಯ ಅವರು ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಬಿ. ಕಾಂನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ವರೆಗೆ ಬಾಂಧವ್ಯ ಅವರು 4ನೇ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು.

ಅವರ ಈ ಸಾಧನೆಯ ಕುರಿತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯು ಹೆಚ್ಚಿನ ಪ್ರೋತ್ಸಾಹ ನೀಡಿದ್ದು ಹಾಗೂ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನೀಡಿದ ಸಹಕಾರದಿಂದ ಈ ಮಟ್ಟಕ್ಕೆ ಸೇರಲು ಸಾಧ್ಯವಾಗಿದೆ ಎಂದು ಬಾಂಧವ್ಯ ಸಂತೋಷವನ್ನು ವ್ಯಕ್ತಪಡಿಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications