ನವೆಂಬರ್ 16 ರಂದು ಮೂಡಬಿದ್ರೆಯಲ್ಲಿ 15 ನೇ ಆಳ್ವಾಸ್ ನುಡಿಸಿರಿ
ಮಂಗಳೂರು, ಆಗಸ್ಟ್ 28: ಕನ್ನಡ ನಾಡು-ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 15 ನೇ ಆಳ್ವಾಸ್ ನುಡಿಸಿರಿ ನವೆಂಬರ್ 16 ರಿಂದ 3 ದಿನಗಳ ಕಾಲ ನಡೆಯಲಿದೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಈ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯ 15 ನೇ ವರ್ಷದ ಸಮ್ಮೇಳನವಾಗಿದೆ.
ನವಂಬರ್ 16, 17 ಮತ್ತು 18ರಂದು ಮೂರು ದಿನಗಳ ಕಾಲ ಆಳ್ವಾಸ್ ನುಡಿಸಿರಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.
ನವಂಬರ್ 16 ರಂದು ಮುಂಜಾನೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, ನವೆಂಬರ್ 18ರ ಆದಿತ್ಯವಾರ ಸಮ್ಮೇಳನವು ಸಂಪನ್ನಗೊಳ್ಳಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ಶೀಘ್ರವಾಗಿ ಅಂತಿಮ ಸ್ಪರ್ಷ ನೀಡಲು ತೀರ್ಮಾನಿಸಲಾಗಿದೆ.

ಎಂದಿನಂತೆ ಈ ಬಾರಿಯೂ ಆಳ್ವಾಸ್ ಕಾಲೇಜು ಆವರಣದ ರತ್ನಾಕರವರ್ಣಿ ವೇದಿಕೆಯ ನುಡಿಸಿರಿ ಸಭಾಂಗಣದಲ್ಲಿ ಸಮ್ಮೇಳನ ಜರುಗಲಿದೆ.
ಪ್ರತಿನಿಧಿಯಾಗ ಬಯಸುವ ಕನ್ನಡಾಭಿಮಾನಿಗಳು 100 ರೂಪಾಯಿ ಪ್ರತಿನಿಧಿ ಶುಲ್ಕ ನೀಡಿ ಸದಸ್ಯರಾಗಬಹುದಾಗಿದೆ. ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಉಚಿತ ಪ್ರವೇಶವಿದ್ದು, ಸಮ್ಮೇಳನದ ಯಶಸ್ಸಿಗಾಗಿ ಸಿದ್ಧತೆಗಳು ನಡೆಸಲಾಗುತ್ತಿದೆ.












Click it and Unblock the Notifications