ದಕ್ಷಿಣ ಕನ್ನಡದಲ್ಲಿ ಮತ್ತೆ ಅಮಿತ್ ಶಾ, ಯೋಗಿ ಪ್ರಚಾರದ ಅಬ್ಬರ

ಮಂಗಳೂರು, ಮೇ 08: ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬಳಿಕ ರಾಜ್ಯದ ಕರಾವಳಿಯಲ್ಲಿ ಕಮಲ ಪಾಳಯದಲ್ಲಿ ರಣೋತ್ಸಾಹ ಮೂಡಿದೆ. ಈ ನಡುವೆ ಕರಾವಳಿಗೆ ಮತ್ತೆ ಬಿಜೆಪಿ ಚಾಣಕ್ಯನ ಪ್ರವೇಶವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಮತ್ತೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಅವರೊಂದಿಗೆ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಗುರುತಿಸಲಾಗುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.

Amith Shah and Yogi Adithyanath to visit Dakshina kannada district today

ಇಂದು ಮಂಗಳೂರಿಗೆ ಬರಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರು, ಮಂಗಳೂರು ದಕ್ಷಿಣ ಮತ್ತು ಮಂಗಳೂರು ಉತ್ತರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಂಗಳೂರು ಕ್ಷೇತ್ರದ ಕಾಪಿಕಾಡ್ ನಿಂದ ತೊಕ್ಕೊಟ್ಟಿನವರೆಗೆ ರೋಡ್ ಶೋ ನಡೆಸಲಿರುವ ಅಮಿತ್ ಶಾ ನಂತರ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಿಂದ ಕಾರ್ ಸ್ಟ್ರೀಟ್ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾವೂರಿನಿಂದ ಮರಕಡದವರೆಗೆ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ಬಿಜೆಪಿ ಚಾಣಕ್ಯನ ಪುನರ್ ಆಗಮನ ಕಾಂಗ್ರೆಸ್ ಪಾಳಯದಲ್ಲಿ ನಡುಕ ಹುಟ್ಟಿಸಿದೆ ಎಂದೇ ಹೇಳಲಾಗುತ್ತಿದೆ.

ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕೂಡ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಗಡಿ ಕ್ಷೇತ್ರ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಅಂಗಾರ ಪರ ಪ್ರಚಾರ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+