ಬಾಳುಗೋಡು ಅರಣ್ಯದಲ್ಲಿ ಗಾಯಗೊಂಡಿದ್ದ ಆನೆ ಸಾವು
ಮಂಗಳೂರು, ಮೇ 30: ಸುಬ್ರಹ್ಮಣ್ಯ ಸಮೀಪದ ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾಡಾನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
ಆನೆ ಅರಣ್ಯ ಪ್ರದೇಶದಲ್ಲಿ ಸಾವನ್ನಪ್ಪಿರುವುದನ್ನು ಗಮನಿಸಿದ ಸ್ಥಳೀಯರು ಈ ವಿಚಾರವನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆನೆಯ ಬಗ್ಗೆ ಉದಾಸೀನತೆಯನ್ನು ತೋರಿದ ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ನಾಗರಹೊಳೆಯಿಂದ ಅರಿವಳಿಕೆ ತಜ್ಞರನ್ನು ಕರೆಸಿ ಚಿಕಿತ್ಸೆ ನೀಡಿದ್ದರು. ಆ ಬಳಿಕ ಗಾಯಗೊಂಡ ಈ ಆನೆ ಮೇಲೆ ಮತ್ತೊಂದು ಕಾಡಾನೆ ದಾಳಿ ಮಾಡಿತ್ತು ಎಂದು ಹೇಳಲಾಗಿದೆ. ತೀವ್ರವಾಗಿ ಗಾಯಗೊಂಡ ಆನೆಯು ಇದೀಗ ಸಾವನ್ನಪ್ಪಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎನ್ನುವುದು ಸ್ಥಳೀಯರ ಆರೋಪ.












Click it and Unblock the Notifications