ಮಂಗಳೂರು: 25 ವಯಸ್ಸಿಗೆ ಜಡ್ಜ್‌ ಹುದ್ದೆಗೇರಿದ ಬಂಟ್ವಾಳದ ಅನಿಲ್‌ ಜಾನ್‌ ಸಿಕ್ವೆರಾ

ಮಂಗಳೂರು, ಫೆಬ್ರವರಿ 24: 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ 25 ವರ್ಷದ ಯುವಕ ಅನಿಲ್‌ ಜಾನ್‌ ಸಿಕ್ವೆರಾ ಉತ್ತೀರ್ಣಗೊಂಡು ರಾಜ್ಯದಲ್ಲಿಯೇ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ ಅನಿಲ್‌ ಜಾನ್‌ ಸಿಕ್ವೆರಾ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್ ಬಿ ಪೂರೈಸಿದ್ದರು. ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಇವರು ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.

Anil John Sequeira Becomes Youngest Civil Judge In Karnataka

ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾ‌ರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ರೊಂದಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಅನಿಲ್ ಜಾನ್ ಸಿಕ್ವೆರಾ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.

ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೆರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆ ಅಧ್ಯಕ್ಷರಾಗಿದ್ದರು. ಅನಿಲ್ ಸಿಕೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+