• search
 • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಿತಾ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ: ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

|
   ಅನಿತಾ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ | Oneindia Kannada

   ಮಂಗಳೂರು, ಅಕ್ಟೋಬರ್. 12: ನಿರೀಕ್ಷೆಯಂತೆ ರಾಮನಗರ ವಿಧಾನಸಭೆ ಉಪಚುನಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆಗಿಳಿಯುವುದು ಖಚಿತವಾಗುತ್ತಿದ್ದಂತೆ ಅನಿತಾ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ.

   ಇಂದು ಶುಕ್ರವಾರ (ಅ.12) ದಕ್ಷಿಣಕನ್ನಡ ಜಿಲ್ಲೆಯ ತೀರ್ಥ ಕ್ಷೇತ್ರಗಳಿಗೆ ಅನಿತಾಕುಮಾರ ಸ್ವಾಮಿ ಭೇಟಿ ನೀಡಿದ್ದಾರೆ. ಉಪಚುನಾವಣೆಯಲ್ಲಿ ಗೆಲುವಿಗಾಗಿ ಅನಿತಾಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.

   ಮುಂಜಾನೆ ದಕ್ಷಿಣಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅನಿತಾ ಕುಮಾರಸ್ವಾಮಿ ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ದೇವರೆದುರು ಬಿ ಫಾರ್ಮ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

   ರಾಮನಗರ : ಅನಿತಾ ಕುಮಾರಸ್ವಾಮಿ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ

   ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅನಿತಾ ಕುಮಾರ ಸ್ವಾಮಿ, ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಮುಂಚೆ ದೇವಸ್ಥಾನಕ್ಕೆ ಬಂದಿದ್ದೇನೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಬರುತ್ತಾ ಇರುತ್ತೇವೆ. ಆದರೆ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ದೇವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಮುಂದೆ ಓದಿ...

    ದೇವರು ನಿರ್ಧರಿಸುತ್ತಾನೆ

   ದೇವರು ನಿರ್ಧರಿಸುತ್ತಾನೆ

   ರಾಜ್ಯದ ಸಮ್ಮಿಶ್ರ ಸರಕಾರದ ಬಗ್ಗೆ ಕೋಡಿ ಮಠ ಸ್ವಾಮಿಗಳು ನುಡಿದ ಭವಿಷ್ಯ ಕುರಿತು ಪ್ರತಿಕ್ರಿಯಿಸಿದ ಅವರು ಕೋಡಿಮಠ ಸ್ವಾಮಿಗಳ ಬಗ್ಗೆ ಅಪಾರ ಗೌರವ ಇದೆ. ಕೋಡಿಮಠ ಸ್ವಾಮಿಗಳು ಹೀಗೆ ಹೇಳಬಾರದಿತ್ತು. ಸರಕಾರದ ಅಳಿವು ಉಳಿವು ಎಲ್ಲವೂ ದೇವರು ನಿರ್ಧರಿಸುತ್ತಾನೆ.

   ರಾಮನಗರ ಉಪ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಘೋಷಣೆ

    ಹೇಳಿಕೆ ಕೊಡುವುದು ನಿಲ್ಲಿಸಲಿ

   ಹೇಳಿಕೆ ಕೊಡುವುದು ನಿಲ್ಲಿಸಲಿ

   ಕೋಡಿಮಠ ಸ್ವಾಮಿಗಳು ಈ ರೀತಿಯ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಕೋಡಿಮಠ ಸ್ವಾಮಿಗಳ ವಿರುದ್ಧ ಅನಿತಾ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

   ಸಿಎಂ ಸ್ಥಾನ ಭದ್ರಪಡಿಸಿಕೊಳ್ಳಲು ಕುಮಾರಸ್ವಾಮಿ ನಿರಂತರ ತಂತ್ರ!

    ನವೆಂಬರ್ 3ರಂದು ಉಪಚುನಾವಣೆ

   ನವೆಂಬರ್ 3ರಂದು ಉಪಚುನಾವಣೆ

   ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪರ್ಧಿಸಿ, ಗೆದ್ದಿದ್ದರು. ನಂತರ ರಾಮನಗರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡಿದ್ದರು.

   ಕುಮಾರ ಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ಘೋಷಿಸಲಾಗಿದೆ.

    ಕೋಡಿಮಠದ ಸ್ವಾಮೀಜಿ ಹೇಳಿರುವುದೇನು?

   ಕೋಡಿಮಠದ ಸ್ವಾಮೀಜಿ ಹೇಳಿರುವುದೇನು?

   ರಾಜಕೀಯ ನಾಯಕರ ಭವಿಷ್ಯ ಹೇಳಿ ಸುದ್ದಿಯಾಗುವ ಕೋಡಿಮಠದ ಸ್ವಾಮೀಜಿ ಅರಸೀಕೆರೆ ತಾಲೂಕು ಮಾಡಾಳು ಗ್ರಾಮದಲ್ಲಿ ಮತ್ತೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹದಿಂದಾಗಿ ರಾಜ್ಯ ಸಮ್ಮಿಶ್ರ ಸರಕಾರ ಶೀಘ್ರವೇ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜ್ಯ ಮೈತ್ರಿ ಸರ್ಕಾರದ ಭವಿಷ್ಯ ಇನ್ನೆರಡು ತಿಂಗಳು ಮಾತ್ರ ಎಂದು ಕೂಡ ಹೇಳಿದ್ದಾರೆ.

   English summary
   Anitha kumaraswamy visits Dharmasthala today. Then She offered special worship to Manjunathaswamiji.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X