ಮಂಗಳೂರು ಮಿನಿ ವಿಧಾನಸೌಧ ನಿರ್ಮಾಣಕ್ಕೆ 9 ವರ್ಷ!

ಮಂಗಳೂರು, ಮೇ 12 : ಮಂಗಳೂರಿನ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಅಂತಿಮಗೊಳಿಸಲು ಮತ್ತೊಂದು ಗಡುವು ನೀಡಲಾಗಿದೆ. ಒಂಭತ್ತು ವರ್ಷಗಳು ಕಳೆದರೂ ವಿಧಾನಸೌಧದ ಕಾಮಗಾರಿ ಪೂರ್ಣಗೊಂಡಿಲ್ಲ. 2006ರಲ್ಲಿ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿದೆ.

2006ರಲ್ಲಿ ಮಂಗಳೂರು ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು, ಸರ್ಕಾರ ಕಾಲ ಕಾಲಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡದಿರುವುದರಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಾ ಬಂದಿದೆ. 2014ರ ಡಿಸೆಂಬರ್‌ನಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ನೀಡಿದ್ದ ಮೂರು ತಿಂಗಳ ಗಡುವು ಮುಕ್ತಾಯಗೊಂಡಿದೆ. [ಮಿನಿ ವಿಧಾನಸೌಧಕ್ಕೆ ಮೂರು ತಿಂಗಳ ಡೆಡ್ ಲೈನ್]

Mangaluru mini vidhana soudha

ಎಲ್ಲಿ ಕಟ್ಟಡ ನಿರ್ಮಾಣ : ಮಂಗಳೂರು ತಾಲೂಕು ಕಚೇರಿ ಆವರಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗುತ್ತಿದೆ. ಮೊದಲು ಸುಮಾರು 7.50 ಕೋಟಿ ರೂ. ವೆಚ್ಚದಲ್ಲಿ ಮೂರು ಹಂತಗಳಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿತ್ತು. ಮೊದಲ ಹಂತದಲ್ಲಿ 2 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿತ್ತು.

ಹೇಗಿದೆ ಕಟ್ಟಡ : 3 ಮಹಡಿಯ ಕಟ್ಟಡದಲ್ಲಿ ಕೆಳ ಅಂತಸ್ತಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲ ಮಹಡಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ, ಕೈಗಾರಿಕಾ, ಭೂ ದಾಖಲೆಗಳ ಕಚೇರಿಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಎರಡನೇ ಮಹಡಿಯಲ್ಲಿ ಅಸಿಸ್ಟೆಂಟ್ ಕಮಿಷನರ್ ಕಚೇರಿ, ಕಾರ್ಮಿಕ ಇಲಾಖೆ, ಸಹಕಾರಿ ಸಂಘಗಳ ಕಚೇರಿಗಳು ಕಾರ್ಯನಿರ್ವಹಿಸಲಿದೆ.

ಹಣ ಬಿಡುಗಡೆಯಾಗಲಿದೆ : ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ. ಆರ್ ಲೋಬೊ ಅವರು ಮಂಗಳೂರು ಮಿನಿ ವಿಧಾನ ಸೌಧದ ಕಾಮಗಾರಿಗೆ ಸರ್ಕಾರದಿಂದ ಪೂರ್ಣಪ್ರಮಾಣದ ಹಣ ಬಿಡುಗಡೆಯಾಗಿಲ್ಲ ಎಂಬ ಅಂಶ ಇದೀಗ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಚರ್ಚಿಸಿ ತಕ್ಷಣ ಹಣ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜೂನ್‌ ಡೆಡ್‌ಲೈನ್ : ಮಿನಿ ವಿಧಾನಸೌಧ ಕಾಮಗಾರಿಯನ್ನು ಜೂನ್‌ನಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೊಸ ಡೆಡ್‌ಲೈನ್ ನೀಡಿದ್ದಾರೆ. ಇನ್ನು ಕೆಲವು ಕೆಲಸಗಳು ಮಾತ್ರ ಬಾಕಿ ಇದ್ದು, ಅವುಗಳನ್ನು ಮೇ ಅಂತ್ಯದಲ್ಲಿ ಪೂರ್ಣಗೊಳಿಸಿ ಜೂನ್‌ನಲ್ಲಿ ಕಟ್ಟಡವನ್ನು ಉದ್ಘಾಟನೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+