ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಗಲಭೆ; 21 ಮಂದಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 10: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 21 ಪಿಎಫ್ ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸದಸ್ಯರಿಗೆ ಬುಧವಾರ ಜಾಮೀನು ನೀಡಿದೆ.

2019ರ ಡಿ. 19ರಂದು ಸಿಎಎ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಿದ್ದು, ಇದೀಗ ಜಾಮೀನು ಮಂಜೂರು ಮಾಡಲಾಗಿದೆ.

ಕುಮಾರಸ್ವಾಮಿ ಬಿಚ್ಚಿಟ್ಟ ಮಂಗಳೂರು ಗೋಲಿಬಾರ್‌ ನ ಇನ್ನೊಂದು ಮುಖಕುಮಾರಸ್ವಾಮಿ ಬಿಚ್ಚಿಟ್ಟ ಮಂಗಳೂರು ಗೋಲಿಬಾರ್‌ ನ ಇನ್ನೊಂದು ಮುಖ

ಈ ಹಿಂದೆ ಇವರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಪ್ರತಿಭಟನಾಕಾರರಿಗೆ ನೀಡಿದ್ದ ಜಾಮೀನಿನ ಮೇಲೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು.

Mangaluru: Anti CAA Violence 21 PFI Members Got Bail

ಮುಖ್ಯ ನ್ಯಾಯಾಧೀಶ ಬಾಬ್ಡೆ, ಎಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ತಲಾ 25,000 ರೂ ಬಾಂಡ್ ಮತ್ತು ಪ್ರತಿ ಸೋಮವಾರ ಸಮೀಪದ ಪೊಲೀಸ್ ಠಾಣೆಯಲ್ಲಿ ವರದಿ ನೀಡಬೇಕು, ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಕೊಳ್ಳಬಾರದು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ.

English summary
Supreme Court granted bail to 21 members of Popular Front of India (PFI) from Mangaluru accused of indulging in violence on December 19 last year during anti-CAA protests,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X