ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಪೊಲೀಸರಿಂದ ಅಂತಾರಾಜ್ಯ ಗಾಂಜಾ ಕಿಂಗ್ ಪಿನ್ ಬಂಧನ

|
Google Oneindia Kannada News

ಮಂಗಳೂರು, ಜನವರಿ25: ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಬೃಹತ್ ಅಂತಾರಾಜ್ಯ ಗಾಂಜಾ ಜಾಲವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಗಾಂಜಾ ಕಿಂಗ್ ಪಿನ್ ಎಂದೇ ಗುರುತಿಸಲಾಗುವ ಸಲೀಂ ಬಾಷಾ ಎಂಬವನನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ಹೊರವಲಯದ ತಲಪಾಡಿಯ ತೌಡುಗೋಳಿಯಲ್ಲಿ ದಾಳಿ ನಡೆಸಿದ್ದ ರೌಡಿ ನಿಗ್ರಹ ದಳದ ಪೊಲೀಸರು ಮಹಮ್ಮದ್ ಅಝೀಝ್ ಎಂಬವರನ್ನು ಬಂಧಿಸಿ ಆತನಿಂದ 10 ಕಿಲೋ ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡಿದ್ದರು.

ಬಂಧಿತ ಮಹಮ್ಮದ್ ಅಝೀಝ್ ನನ್ನು ತನಿಖೆಗೆ ಒಳ ಪಡಿಸಿದ ಸಂದರ್ಭದಲ್ಲಿ ಆಂಧ್ರದ ಚಿತ್ತೂರಿನ ಪನಮ್ನೇರು ಎಂಬಲ್ಲಿಂದ ಸಲೀಂ ಬಾಷಾ ಎಂಬವನು ಗಾಂಜಾ ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು.

Anti rowdy squad busts drug racket arrested Ganja Kingpin from Andra Pradesh

ಈ ಹಿನ್ನಲೆಯಲ್ಲಿ ನಗರದ ಕೊಣಾಜೆ ಠಾಣೆಯ ಪೊಲೀಸರು ಹಾಗು ರೌಡಿ ನಿಗ್ರಹದಳದ ಪೊಲೀಸರು ಆಂಧ್ರ ಪ್ರದೇಶಕ್ಕೆ ತೆರಳಿದ್ದರು. ಸಲೀಂ ಬಾಷಾನ ಬಗ್ಗೆ ಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸರ ತಂಡ ಅಂಧ್ರ ಪ್ರದೇಶ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿ, ನಗರಕ್ಕೆ ಕರೆತಂದಿದ್ದಾರೆ.

ಇದು ಇತ್ತೀಚಿನ ದಿನಗಳಲ್ಲಿ ಮಂಗಳೂರು ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಾಗಿದೆ. ಬಂಧಿತ ಗಾಂಜಾ ಕಿಂಗ್ ಪಿನ್ ಸಲೀಂ ಬಾಷಾನನ್ನು ಕೂಲಂಕಷ ವಿಚಾರಣೆ ನಡೆಸಿದಾಗ ಆತ ಮಂಗಳೂರಿನ ಜಬ್ಬಾರ್, ಅಝೀಝ್ ಹಾಗೂ ನವೀನ್ ಎಂಬವರಿಗೆ ಗಾಂಜಾ ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

English summary
Mangaluru South anti rowdy squad busted major Ganja racket. They along with Konaje police conducted raid in Andhra Pradesh and arrested main Ganja kingpin Salim Bhasha near Chittur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X