ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!

|
Google Oneindia Kannada News

Recommended Video

ಕುಸಿಯುವ ಭೀತಿಯಲ್ಲಿ ಪಶ್ಚಿಮ ಘಟ್ಟ..! | Oneindia Kannada

ಮಂಗಳೂರು, ಆಗಸ್ಟ್ 21 : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.

ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.

ಜೋಡುಪಾಳ, ಮದೆನಾಡು ದುರಂತದ ಮುನ್ಸೂಚನೆ ನೀಡಿದ್ದವೆ ಕಾಡುಪ್ರಾಣಿಗಳು?ಜೋಡುಪಾಳ, ಮದೆನಾಡು ದುರಂತದ ಮುನ್ಸೂಚನೆ ನೀಡಿದ್ದವೆ ಕಾಡುಪ್ರಾಣಿಗಳು?

ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು.

Anxiety about collapse of the Western Ghats.

ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Anxiety about collapse of the Western Ghats.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ.

Anxiety about collapse of the Western Ghats.

ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್

ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

English summary
There is anxiety about the collapse of the Western Ghats. Already Land was cracked incident occurred at Kujumale, Kalmakaru forest area on the border of Sullia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X