ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಕಂದಾಯ ಇಲಾಖೆಯಲ್ಲಿ 50 ಹುದ್ದೆ ಖಾಲಿ ಇದೆ

|
Google Oneindia Kannada News

ಮಂಗಳೂರು, ಜ. 2 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ತಾಲೂಕುಗಳಲ್ಲಿ ಖಾಲಿ ಇರುವ 50 ಗ್ರಾಮ ಲೆಕ್ಕಿಗರ (Village Accountants)ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 27.

ದ್ವಿತೀಯ ಪಿಯುಸಿ ಪರೀಕ್ಷೆ ಅಥವ CBSC, ICSC ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ವೃತ್ತಿಪರ ಕೋರ್ಸ್ ಹಾಗೂ ಯಾವುದೇ ಇತರೆ ತತ್ಸಮಾನ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. [ನೇಮಕಾತಿ ಅಧಿಸೂಚನೆ ಇಲ್ಲಿದೆ]

District

ವಯೋಮಿತಿ : ಸರ್ಕಾರದ ಅಧಿಸೂಚನೆ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವ ವರ್ಗಾವಣೆ ಪತ್ರದಲ್ಲಿ ನಮೂದಿಸಿರುವ ಜನ್ಮ ದಿನಾಂಕವನ್ನು ಮಾತ್ರ ಆಯ್ಕೆ ಪ್ರಾಧಿಕಾರ ನೇಮಕಾತಿಯ ಸಂದರ್ಭದಲ್ಲಿ ಪರಿಗಣಿಸುತ್ತದೆ. ಇತರೆ ಯಾವುದೇ ದಾಖಲೆಗಳನ್ನು ಪರಿಗಣಿಸುವುದಿಲ್ಲ.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಮತ್ತು ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 500 ರೂ. ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 27 ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

English summary
Dakshina Kannada District Revenue Department invites applications for recruitment of Village Accountants for filing up 50 Vacancies. Eligible candidates apply online before 27th January 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X