ಸುರತ್ಕಲ್: ಕೆಲಸಗಾರನಿಂದ ಮಾಲೀಕನಿಗೆ ಚೂರಿ ಇರಿತ
ಮಂಗಳೂರು, ಫೆಬ್ರವರಿ. 05 : ಯುವಕನೋರ್ವ ತಾನು ಕೆಲಸ ಮಾಡುತ್ತಿದ್ದ ಬಟ್ಟೆ ಅಂಗಡಿ ಮಾಲೀಕನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಶನಿವಾರ ಮಧ್ಯರಾತ್ರಿ ಸುರತ್ಕಲ್ ನ ಮುಡಾ ಮಾರುಕಟ್ಟೆ ಬಳಿ ನಡೆದಿದೆ.
ಸುರತ್ಕಲ್ ಕೃಷ್ಣಾಪುರ ನಿವಾಸಿ ಬಟ್ಟೆ ಅಂಗಡಿ ಮಾಲೀಕ ಶಮೀಂ(19) ಎಂಬಾತನಿಗೆ ಅದೇ ಅಂಗಡಿಯ ಕೆಲಸಗಾರ ಮುನಾವರ್ ಎಂಬಾತ ಕ್ಷುಲ್ಲಕ್ಕೆ ಕಾರಣಕ್ಕೆ ಚೂರಿಯಿಂದ ಇರಿದಿದ್ದಾನೆ. ಇದರಿಂದ ಶಮೀಂ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಡಾ ಮಾರುಕಟ್ಟೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಶಮೀಂ ಹಾಗೂ ಆತನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುನಾವರ್ ಗೂ ಸಣ್ಣ ವಿಷಯಕ್ಕೆ ಮಾತಿನ ಚಕಮಕಿ ನಡೆದು ಅದು ಅತಿರೇಕಕ್ಕೆ ತೆರಳಿ ಈ ಘಟನೆ ನಡೆದಿದೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications