ಕಾಶ್ಮೀರದಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ
ಮಂಗಳೂರು, ನವೆಂಬರ್ 23: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಮಂಗಳೂರು ಮೂಲದವರಾಗಿದ್ದು, ಇಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಸೇನೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಂಗಳೂರಿನಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್ ಮತ್ತು ಅನುರಾಧ ದಂಪತಿಯ ಏಕೈಕ ಪುತ್ರನಾಗಿರುವ ಪ್ರಾಂಜಲ್ ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದಾರೆ. ಎಂಆರ್‌ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ ಹತ್ತನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದು ಬಳಿಕ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್‌ನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದು ಸೇನೆಗೆ ಸೇರಿದ್ದರು.

ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪ್ರಾಂಜಲ್ ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. ಇದೀಗ ಯೋಧ ಪ್ರಾಂಜಲ್ ಅವರ ಸಾವು ಕುಟುಂಬಸ್ಥರನ್ನು ದಿಗ್ಭ್ರಮೆಗೊಳಿಸಿದೆ. 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿರುವ ಪ್ರಾಂಜಲ್, ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ವೀರಮರಣ ಹೊಂದಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಂಜಲ್ ಜೊತೆಗೆ 9 ಪಿಎಆರ್‌ಎ ಕ್ಯಾಪ್ಟನ್ ಶುಭಂ, ಮತ್ತು ಹವಾಲ್ದಾರ್ ಮಜೀದ್ ಮೃತರಾಗಿದ್ದಾರೆ. ಐದರಿಂದ ಆರು ಮಂದಿ ಇರುವ ಉಗ್ರರ ಗುಂಪು ದಾಳಿ ಮಾಡಿದ್ದು ಉಗ್ರರ ಬೇಟೆಗೆ ಭಾರತೀಯ ಸೇನೆ ಕಾರ್ಯಾಚರಣೆಗೆ ಇಳಿದಿದೆ. ಈ ವೇಳೆ ಈ ಘಟನೆ ಸಂಭವಿಸಿದೆ.
ಪ್ರಾಂಜಲ್ ಸಾವಿನ ಹಿನ್ನಲೆಯಲ್ಲಿ ಎಂಆರ್‌ಪಿಎಲ್ ಡೆಲ್ಲಿ ಶಾಲೆಗೆ ಗುರುವಾರ ರಜೆ ಘೋಷಿಸಲಾಗಿದೆ. ಶಾಲೆಯಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದು , ಓದಿನಲ್ಲೂ ಪ್ರಾಂಜಲ್ ಮುಂದಿದ್ದ ಎಂದು ಶಾಲೆಯ ಶಿಕ್ಷಕಿಯರು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications