Lok Sabha: ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಫಿಕ್ಸ್: ಮತ್ತೆ ಬಿಜೆಪಿಗೆ ಸಿಂಹಸ್ವಪ್ನವಾಗ್ತಾರಾ ಹಿಂದೂ ಹುಲಿ
ಮಂಗಳೂರು, ಫೆಬ್ರವರಿ 29: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದ ಪುತ್ತೂರಿನ ಹಿಂದೂ ಹುಲಿ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ನಾಯಕರೊಂದಿಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಈ ಬಗ್ಗೆ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿದ್ದರು. ಈ ವೇಳೆ ಬಿಜೆಪಿ ಪಕ್ಷಕ್ಕೆ ಹಲವು ಬೇಡಿಕೆ ಇಟ್ಟಿದ್ದರು. ಆದರೆ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಬಿಜೆಪಿಯ ಹಿರಿಯ ನಾಯಕರು ಸೂಚಿಸಿದ್ದರು ಎನ್ನಲಾಗಿದೆ. ಸದ್ಯ ಬಿಜೆಪಿ ಮುಖಂಡರ ಜೊತೆಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications