ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುತ್ತೂರು: ಲಾಡ್ಜ್ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ದಾಳಿ: ಇಬ್ಬರ ಬಂಧನ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 21: ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲೂ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಲಾಡ್ಜ್‌ನಲ್ಲಿ ತಂಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಲಾಡ್ಜ್ ಮೇಲೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಅಲ್ಲದೇ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಾಜೇಶ್ವರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾಳಿ ಮಾಡಿದ ಹಿಂದೂ ಜಾಗರಣ ವೇದಿಕೆಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಆಸ್ಮಿ ಲಾಡ್ಜ್‌ನಲ್ಲಿ ಬೆಂಗಳೂರು ಮೂಲದ ರಾಜೇಶ್ವರಿ ಎನ್ನುವ ಮಹಿಳೆ ಸೆಪ್ಟಂಬರ್ 18ರಂದು ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದು, ಪುತ್ತೂರಿನ ಆಸ್ಮಿ ಲಾಡ್ಜ್‌ನಲ್ಲಿ ತಂಗಿದ್ದರು. ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ತನ್ನ ಕಾರನ್ನು ಬಿಡಿಸಿಕೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದ ಈ ಮಹಿಳೆಯ ಜೊತೆ ಆಕೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಉಳ್ಳಾಲ ನಿವಾಸಿಯಾದ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರಿನ ಕೊಟ್ಟಿಗೇರಿ ನಿವಾಸಿ ಶಿವ ಎಂಬುವರೂ ಇದ್ದರು.

ಮಹಿಳೆಯರಿಗೆ ಮಚ್ಚಿನೇಟು; ಆರೋಪಿ ಕೊಟ್ಟ ಕಾರಣಕ್ಕೆ ಪೊಲೀಸರು ತಬ್ಬಿಬ್ಬು! ಮಹಿಳೆಯರಿಗೆ ಮಚ್ಚಿನೇಟು; ಆರೋಪಿ ಕೊಟ್ಟ ಕಾರಣಕ್ಕೆ ಪೊಲೀಸರು ತಬ್ಬಿಬ್ಬು!

ಈ ಹಿಂದೆ ಈ ಮಹಿಳೆಯ ಕಾರನ್ನು ಮಹಮ್ಮದ್ ಆರಾಫತ್ ಬೆಂಗಳೂರಿನಿಂದ ಮಂಗಳೂರಿಗೆ ತಂದಿದ್ದ. ಈ ವೇಳೆ ಆರಾಫತ್ ಸ್ನೇಹಿತರು ಮಹಿಳೆಯ ಕಾರನ್ನು ಜಾಲಿ ರೌಂಡ್‌ಗೆ ತೆಗೆದುಕೊಂಡು‌ ಹೋಗಿದ್ದು, ಉಪ್ಪಿನಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೈಡ್ ಕೊಡದ ಹಿನ್ನಲೆಯಲ್ಲಿ ಲಾರಿ ಚಾಲಕನಿಗೆ ಹಲ್ಲೆ‌ ನಡೆಸಿ ಪರಾರಿಯಾಗಿದ್ದರು. ಈ ವಿಚಾರ ಪುತ್ತೂರು ಠಾಣೆ ಪೊಲೀಸರಿಗೆ ಗೊತ್ತಾಗಿ, ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ತಪಾಸಣೆ ಮಾಡಿದ್ದಾರೆ.

Mangaluru: Moral Policing By Hindu Jagarana Vedike Activists In Puttur

ಸೆಪ್ಟೆಂಬರ್ 20ರಂದು ತಡರಾತ್ರಿ ಲಾಡ್ಜ್ ಮೇಲೆ ದಾಳಿ
ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್‌ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸೆಪ್ಟೆಂಬರ್ 20ರಂದು ತಡರಾತ್ರಿ ಲಾಡ್ಜ್ ಮೇಲೆ ದಾಳಿ ಮಾಡಿ, ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದಾರೆ.

ಸುಮಾರು ಹತ್ತರಿಂದ ಹದಿನೈದು ಜನರಿದ್ದ ಗುಂಪು ಲಾಡ್ಜ್ ಮುಂಭಾಗದಲ್ಲಿ ಸೇರಿದ್ದು, ಇದರಲ್ಲಿ ನಾಲ್ಕೈದು ಜನರ ಗುಂಪು ಲಾಡ್ಜ್ ಒಳಗೆ ಬಂದು ಮಹಿಳೆ ಹಾಗೂ ಆಕೆಯ ಸಹೋದ್ಯೋಗಿಗಳು ತಂಗಿದ್ದ ರೂಂಗೆ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನಕುಮಾರ್ ನೇತೃತ್ವದ ತಂಡ ಲಾಡ್ಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರು ಡಿವೈಎಸ್ಪಿ ಗಾನಕುಮಾರ್ ನೇತೃತ್ವದ ತಂಡ ಲಾಡ್ಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆ ರಾಜೇಶ್ವರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಾಳಿ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Mangaluru: Moral Policing By Hindu Jagarana Vedike Activists In Puttur

ಪುತ್ತೂರು ಹಾಗೂ ಇತರ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಾಡ್ಜ್‌ಗಳಲ್ಲಿ ತಂಗಲು ಬರುವವರ ಸರಿಯಾದ ವಿಳಾಸ ಹಾಗೂ ಗುರುತು ಪತ್ರವನ್ನು ಪರಿಶೀಲನೆ ನಡೆಸಲಾಗುತ್ತಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ. ಇದರಿಂದಾಗಿ ಲಾಡ್ಜ್‌ಗಳಲ್ಲಿ ತಂಗಲು ಬರುವ ಜನರು ಕೆಲವು ಕಾನೂನುಬಾಹಿರ ಕೃತ್ಯಗಳಲ್ಲೂ ತೊಡಗುತ್ತಿದ್ದಾರೆ. ಇದು ಸಾಮಾಜದ ಸ್ವಾಸ್ಥ್ಯಕ್ಕೂ ಧಕ್ಕೆಯುಂಟಾಗುತ್ತಿದೆ. ಇದರಿಂದಾಗಿ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಂಘಟನೆಗಳು ಆರೋಪಿಸಿವೆ.

ಬೆಂಗಳೂರಿನಲ್ಲಿ ಮಹಿಳೆಯೋರ್ವರಿಗೆ ಬೈಕ್‌ನಲ್ಲಿ ಡ್ರಾಪ್ ಕೊಟ್ಟ ಒಂದೇ ಕಾರಣಕ್ಕೆ ಬೈಕ್ ಸವಾರನ ಹಲ್ಲೆ ನಡೆಸಿದ ಘಟನೆ ಕಾವು ಆರುವ ಮೊದಲೇ ಪುತ್ತೂರಿನಲ್ಲಿ ಮತ್ತೊಂದು ಇಂಥದ್ದೇ ಘಟನೆ ನಡೆದಿದೆ. ಬೆಂಗಳೂರಿನ ಘಟನೆಯ ಬಳಿಕ ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಶೀಘ್ರ ಪತ್ತೆಗೆ ಮುಂದಾಗಿದ್ದಾರೆ.

English summary
Hindu Jagarana Vedike activists have attacked the lodge of Puttur in Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X