ಮಂಗಳೂರು ನೈತಿಕ ಪೊಲೀಸ್ ಗಿರಿ ಪ್ರಕರಣ, 3 ಆರೋಪಿಗಳ ಬಂಧನ
ಮಂಗಳೂರು, ಮಾರ್ಚ್ 26: ಮಂಗಳೂರು ಹೊರವಲಯದ ತಣ್ಣೀರು ಬಾವಿ ಬೀಚ್ ಬಳಿ ನಡೆದಿದೆ ಎನ್ನಲಾದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಠಾಣೆಯ ಪೊಲೀಸರು 3 ಮಂದಿ ಅರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈಕಂಪಾಡಿ ಮೀನಕಳಿಯ ನಿವಾಸಿ ಸುಕೇಶ್ ಪುತ್ರನ್, ತಣ್ಣೀರುಬಾವಿ ನಿವಾಸಿಗಳಾದ ವರುಣ್, ದೀಕ್ಷಿತ್ ಎಂದು ಗುರುತಿಸಲಾಗಿದೆ.
ಮಾರ್ಚ್ 24ರ ಸಂಜೆ ಮಂಗಳೂರು ಹೊರವಲಯದ ತಣ್ಣೀರುಬಾವಿ ಬೀಚ್ ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳ ತಂಡದ ಮೇಲೆ ಯುವಕರ ಗಂಪೊಂದು ನೈತಿಕ ಪೊಲೀಸ್ ಗಿರಿ ನಡೆಸಿದೆ ಎಂದು ಅರೋಪಿಸಲಾಗಿದೆ.
ತಣ್ಣೀರುಬಾವಿಯ ಫಾತಿಮಾ ಚರ್ಚ್ ಬಳಿಯ ಬೀಚ್ ನಲ್ಲಿ ನಗರದ ಕುಲಾಸೊ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರ ಜೊತೆ ಸಾಬಿತ್, ಸಮೀರ್ ಮತ್ತು ನಿತೇಶ್ ಎಂಬ ಮೂವರು ಮಂದಿ ವಿದ್ಯಾರ್ಥಿಗಳು ಬರ್ತ್ ಡೇ ಸಂಭ್ರಮ ಆಚರಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ ಎಂದು ಹೇಳಲಾಗಿತ್ತು.

ಇಬ್ಬರು ವಿದ್ಯಾರ್ಥಿನಿಯರ ಜೊತೆಗಿದ್ದ ಸಾಬಿತ್, ಸಮೀರ್ ಮತ್ತು ನಿತೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಹುಟ್ಟುಹಬ್ಬದ ಸಂಭ್ರಮಾಚಾರಣೆ ನಿರತರಾಗಿದ್ದ ವಿದ್ಯಾರ್ಥಿಗಳು ತಮ್ಮೊಂದಿಗಿದ್ದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿ ಈ ಹಲ್ಲೆ ನಡೆಸಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಳಿಕ ವಿದ್ಯಾರ್ಥಿನಿಯರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರೆಂಬುದನ್ನು ತಿಳಿದ ಬಳಿಕ ಯುವಕರ ತಂಡ ಸ್ಥಳದಿಂದ ಪರಾರಿಯಾಗಿತ್ತು. ಹಲ್ಲೆಗೊಳಗಾದ ಯುವಕರಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಘಟನೆಯ ಕುರಿತು ತನಿಖೆ ನಡೆಸಿದ ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ನಡುವೆ ತಣ್ಣೀರುಬಾವಿಯ ಫಾತಿಮಾ ಬೀಚ್ ಬಳಿಯ ಗ್ರಾಮಸ್ಥರು ಮಂಗಳೂರು ಪೊಲೀಸ್ ಕಮಿಷನರನ್ನು ಭೇಟಿಯಾಗಿದ್ದು, ಪಾರ್ಟಿಯ ನೆಪದಲ್ಲಿ ವಿದ್ಯಾರ್ಥಿಗಳು ಸ್ಥಳೀಯರಿಗೆ ಅಸಹ್ಯವಾಗುವಂತೆ ವರ್ತಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಿ, ಅಲ್ಲಿಂದ ತೆರಳುವಂತೆ ಸ್ಥಳೀಯರು ಸೂಚಿಸಿದ್ದನ್ನೇ ತಿರುಚಿ, ರಾತ್ರಿ ಯಾರದ್ದೋ ಒತ್ತಡಕ್ಕೆ ಮಣಿದು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಗ್ರಾಮಾಸ್ಥರು ಕಿಡಿಕಾರಿದ್ದಾರೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications