Get Updates
Get notified of breaking news, exclusive insights, and must-see stories!

ವಿಧಾನಸಭಾ ಚುನಾವಣೆ: ಜನವರಿ 7ರಂದು ಎಸ್‌ಡಿಪಿಐನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಅಬ್ದುಲ್ ಮಜೀದ್

ಮಂಗಳೂರು, ಡಿಸೆಂಬರ್‌, 21: ವಿಧಾನಸಭಾ ಚುನಾವಣೆಗೆ ಈ ಬಾರಿ 100ಕ್ಕಿಂತಲೂ ಅಧಿಕ ಕ್ಷೇತ್ರಗಳಲ್ಲಿ ಎಸ್‌ಡಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನವರಿ 7ರಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಿದ್ದಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಂಗಳೂರಿನಲ್ಲಿ ಹೇಳಿದರು.

ಮಂಗಳೂರಿನಲ್ಲಿ ಖಾಸಗಿ ಹೊಟೇಲ್‌ನಲ್ಲಿ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲೂ ಎಸ್‌ಡಿಪಿಐ ಸ್ಪರ್ಧಿಸಲಿದೆ. ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಹಾಗೂ ಜಿಲ್ಲೆಗಳಿಂದ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಲಾಗುತ್ತದೆ. ಅಲ್ಲಿ 3 ಅಭ್ಯರ್ಥಿಗಳ ಹೆಸರು ಅಂತಿಮಗೊಂಡು ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿಗೆ ಕಳುಹಿಸಲಾಗುತ್ತದೆ. ಬಳಿಕ ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳುತ್ತದೆ ಎಂದರು.

ಚುನಾವಣಾ ಕಣದ ಬೇರೆ ಬೇರೆ ಕ್ಷೇತ್ರಗಳಲ್ಲಿ ನನ್ನ ಹೆಸರನ್ನು ಕೂಡ ಪ್ರಸ್ತಾಪಿಸಲಾಗುತ್ತಿದೆ‌. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಹೆಸರನ್ನು ಸೂಚಿಸಲಾಗಿದೆ. ಅಲ್ಲದೆ ನಾನು ಈಗಾಗಲೇ ಎರಡು ಬಾರಿ ಸ್ಪರ್ಧಿಸಿರುವ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲೂ ನನ್ನ ಹೆಸರಿನ ಪಟ್ಟಿ ಹೋಗಿದೆ. ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಎಲ್ಲಿ ಸೂಚಿಸುತ್ತದೆಯೇ ಅಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಅಬ್ದುಲ್ ಮಜೀದ್ ಮೈಸೂರು ಹೇಳಿದರು.

 ಎನ್ಐಎಯಿಂದ 20 ಕಚೇರಿಗಳಿಗೆ ಬೀಗ

ಎನ್ಐಎಯಿಂದ 20 ಕಚೇರಿಗಳಿಗೆ ಬೀಗ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್‌ಡಿಪಿಐನ ಒಟ್ಟು 20 ಕಚೇರಿಗಳಿಗೆ ಎನ್ಐಎ ಅಕ್ರಮವಾಗಿ ಬೀಗ ಮುದ್ರೆ ಜಡಿದಿದೆ ಎಂದು ನಾವು ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದ್ದೇವೆ. ಈಗಾಗಲೇ ಉಚ್ಚ ನ್ಯಾಯಾಲಯದಿಂದ ಸರಕಾರ, ಎಸ್‌ಪಿ, ಪೊಲೀಸ್ ಕಮಿಷನರ್, ಜಿಲಾಧಿಕಾರಿಗಳಿಗೆ ನೋಟಿಸ್ ಬಂದಿದೆ. ಆದರೆ ಕೋರ್ಟ್ ನಿಗದಿಪಡಿಸಿರುವ ದಿನಾಂಕಕ್ಕೆ ಇವರು ಯಾವುದೇ ಜವಾಬು ನೀಡಿಲ್ಲವೆಂದು ದಿನಾಂಕವನ್ನು ಮುಂದೂಡಲಾಗಿದೆ. ಈಗ ಉಚ್ಚ ನ್ಯಾಯಾಲಯಕ್ಕೆ ರಜೆ ಇರುವುದರಿಂದ ಮುಂದಿನ ದಿನಗಳಲ್ಲಿ ವಾದ ನಡೆಯಲಿದೆ ಎಂದು ಅಬ್ದುಲ್ ಮಜೀದ್ ತಿಳಿಸಿದರು.

 ಸರ್ಕಾರದ ವಿರುದ್ಧ ಅಬ್ದುಲ್ ಆರೋಪ

ಸರ್ಕಾರದ ವಿರುದ್ಧ ಅಬ್ದುಲ್ ಆರೋಪ

ಇನ್ನು ಇದೇ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ನಡೆಯುತ್ತಿರುವ ನೈತಿಕ ಪೋಲಿಸ್ ಗಿರಿ ಪ್ರಕರಣದ ಬಗ್ಗೆ ಮಾತನಾಡಿದ ಮಜೀದ್, ಬಿಜೆಪಿ ಸರ್ಕಾರದ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ನಡೆಯುತ್ತಿದೆ. ಅನೈತಿಕ ಗೂಂಡಾಗಿರಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂಬ ವಿಚಾರ ಜನಪ್ರತಿನಿಧಿಗಳ ಹೇಳಿಕೆಗಳಿಂದ ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.

 ಗೂಂಡಾಗಿರಿಗೆ ಸಂಪೂರ್ಣವಾಗಿ ಬ್ರೇಕ್‌ ಹಾಕಿ

ಗೂಂಡಾಗಿರಿಗೆ ಸಂಪೂರ್ಣವಾಗಿ ಬ್ರೇಕ್‌ ಹಾಕಿ

ಅನೈತಿಕ ಗೂಂಡಾಗಿರಿಯನ್ನು ಎಸ್‌ಡಿಪಿಐ ಖಂಡಿಸುತ್ತದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ತನ್ನ ಹೊಣೆಗಾರಿಕೆಯನ್ನು ಹೊರಬೇಕು. ಅಧಿವೇಶನದಲ್ಲಿ ಈ ಬಗ್ಗೆ ಎಲ್ಲಾ ವಿರೋಧ ಪಕ್ಷಗಳು ಗಂಭೀರ ಚರ್ಚೆ ನಡೆಸಿ, ಅನೈತಿಕ ಗೂಂಡಾಗಿರಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕಿದೆ. ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ನಡೆಯುತ್ತಿದೆ ಎಂಬುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿಯೇ ಒಪ್ಪಿಕೊಂಡಿದ್ದಾರೆ. ಕಳೆದ 2 ವರ್ಷದಲ್ಲಿ 31 ಪ್ರಕರಣಗಳು ದಾಖಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ‌ ಎಂದು ಹೇಳಿದರು.

 ಗೂಂಡಾಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು

ಗೂಂಡಾಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು

ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸದೇ ಕಾಯುವುದೇಕೆ?. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ ಮಾಡುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬಹುದಲ್ಲ. ಇನ್ನೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬರಲಾರದಷ್ಟು ಹದಗೆಡುವ ಸಾಧ್ಯತೆಯಿದೆ. ಆದ್ದರಿಂದ ಎಸ್‌ಪಿ ಹಾಗೂ ಪೊಲೀಸ್ ಕಮಿಷನರ್ ಅವರು ಇಂತಹ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಬೇಕು. ಗುಪ್ತಚರ ಇಲಾಖೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕಾರ್ಯವೂ ಆಗಲಿ ಎಂದು ಅಬ್ದುಲ್ ಮಜೀದ್ ಆಗ್ರಹಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+