ಅಯೋಧ್ಯಾ ತೀರ್ಪು: ವೀರೇಂದ್ರ ಹೆಗ್ಗಡೆಯವರು ಹೇಳಿದ್ದೇನು?

ಮಂಗಳೂರು, ನವೆಂಬರ್ 9: ಅಯೋಧ್ಯಾ ಭೂ ವಿವಾದದ ಕುರಿತು ಸುಪ್ರೀಂಕೋರ್ಟ್‌ನಿಂದ ಐತಿಹಾಸಿಕ ತೀರ್ಪು ಹೊರಬಿದ್ದಿರುವ ಹೊತ್ತಿನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇ ಬೇಕು. ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಲಾಗಿದೆ. ಮುಸ್ಲಿಮರಿಗೆ ಪ್ರತ್ಯೇಕ ಮಸೀದಿ ನೀಡಲು ಜಾಗವನ್ನೂ ನೀಡಲಾಗಿದೆ. ಯಾರಿಗೂ ಅನ್ಯಾಯವಾಗಿಲ್ಲ ಎಂದು ಹೇಳಿದ್ದಾರೆ.

ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೆಯೋ ಗೊತ್ತಿಲ್ಲ. ನಾವು ಸೇವಿಸುವ ತರಕಾರಿಯನ್ನು ಹಿಂದೂ ಬೆಳೆದಿರುವುದಾ, ಮುಸಲ್ಮಾನ ಅಥವಾ ಕ್ರೈಸ್ತ ಬೆಳೆದಿರುವುದಾ ಗೊತ್ತಿಲ್ಲ. ಅದೇ ರೀತಿ ಹಾಲು-ನೀರು ಬೆರೆತಂತೆ ಸಮಾಜ ಇರಬೇಕು.

Ayodhya verdict What did Veerendra Heggade Said

ತೀರ್ಪಿನಿಂದ ಯಾರೂ ಚಂಚಲ ಆಗಬಾರದು. ತೀರ್ಪಿನ ನಂತರ ಸಾಮರಸ್ಯದಿಂದ ಬದುಕಬೇಕು. ಈ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳೋಣ ಎಂದು ಹೆಗ್ಗಡೆಯವರು ರಾಷ್ಟ್ರದ ಜನತೆಯಲ್ಲಿ ಮನವಿ ಮಾಡಿದರು.

ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್‌ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+