ಅಂಗನವಾಡಿ ಮಕ್ಕಳಿಗಾಗಿ ಬಿಸ್ಕೆಟ್ ಭಾಗ್ಯ ಯೋಜನೆ

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಯು.ಟಿ.ಖಾದರ್, ಆಯುರ್ವೇದಿಕ್ ಗಿಡಮೂಲಿಕೆಗಳಿಂದ ತಯಾರಿಸಿದ ಆಯುಷ್ ಪುಷ್ಟಿ ಬಿಸ್ಕತ್ ಗಳನ್ನು ಅಂಗನವಾಡಿ ಮಕ್ಕಳಿಗೆ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪೌಷ್ಟಿಕಾಂಶ ಕೊರತೆ ಅನುಭವಿಸುತ್ತಿರುವ ಮಕ್ಕಳಿರುವ ಒಂದು ತಾಲೂಕಿನಲ್ಲಿ ಆರಂಭಿಸಿ, ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು.
ಆಯುಷ್ ಪುಷ್ಟಿ ಬಿಸ್ಕತ್ತು ಉತ್ಪಾದನಾ ಕೇಂದ್ರವನ್ನು ಆಯುಷ್ ಇಲಾಖೆ ವತಿಯಿಂದ ನಡೆಸಲಾಗುವುದು. ಒಂದು ತಾಲೂಕಿಗೆ ಬೇಕಾಗುವಷ್ಟು ಬಿಸ್ಕತ್ತು ಈಗಾಗಲೇ ಸಿದ್ಧಪಡಿಸಲಾಗಿದೆ. ಮಕ್ಕಳ ಆರೋಗ್ಯವನ್ನು ಸುಸ್ಥಿರಗೊಳಿಸುವ ಏಕೈಕ ಉದ್ದೇಶದಿಂದ ಈ ಬಿಸ್ಕತ್ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಶೀಘ್ರವೇ ಮೊಬೈಲ್ : ಕರ್ನಾಟಕದ 35 ಸಾವಿರ ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ಹಾಗೂ ಸಿಮ್ ಕಾರ್ಡ್ ಉಚಿತವಾಗಿ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಗಿದೆ. ಎಲ್ಲ ಆಶಾ ಕಾರ್ಯಕರ್ತೆಯರಿಗೆ ಏಕ ಕಾಲದಲ್ಲಿ ಮೊಬೈಲ್ ತಲುಪಿಸಲಾಗುವುದು ಎಂದು ಹೇಳಿದರು.
ಏಕೀಕೃತ ಮೆಡಿಸಿನ್ ಕೇಂದ್ರ : ಪ್ರತಿ ಜಿಲ್ಲೆಯಲ್ಲಿಯೂ ಏಕೀಕೃತ ಮೆಡಿಸಿನ್ ಕೇಂದ್ರ ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ ಎಂದು ಖಾದರ್ ಹೇಳಿದ್ದಾರೆ. ಒಂದೇ ಕಟ್ಟಡದಲ್ಲಿ ಆಯುರ್ವೇದ, ಹೋಮಿಯೋಪಥಿ, ಯುನಾನಿ, ನ್ಯಾಚುರೋಪತಿ, ಅಲೋಪತಿ ವೈದ್ಯರಿರುತ್ತಾರೆ. ಈ ಯೋಜನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ಆರಂಭಿಸಲಾಗುವುದು ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರುಗಳಿಗೆ ಮಾಸಿಕ ಮೊತ್ತವನ್ನು ಮೆಡಿಕಲ್ ಕಾಲೇಜು ಉಪನ್ಯಾಸಕ ಮೊತ್ತಕ್ಕೆ ಸಮಾನಾಗಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಸೂಕ್ತ ಸಂಭಾವನೆ ನೀಡಲಾಗುವುದು ಎಂದು ಖಾದರ್ ಭರವಸೆ ನೀಡಿದರು
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications