ಹೊಸಬೆಟ್ಟು ಕಡಲ ತೀರಕ್ಕೆ ಬಂದ ಗಾಯಗೊಂಡ ಡಾಲ್ಫಿನ್
ಮಂಗಳೂರು, ಜೂ. 18 : ಸುರತ್ಕಲ್ ಸಮೀಪದ ಹೊಸಬೆಟ್ಟುವಿನ ಕಡಲ ತೀರನಲ್ಲಿ 4 ಅಡಿ ಉದ್ದದ ಡಾಲ್ಫಿನ್ ಒಂದು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿ ಅದನ್ನು ಪುನಃ ಸಮುದ್ರಕ್ಕೆ ಬಿಡಲಾಗಿದೆ.
ಬುಧವಾರ ಬೆಳಗ್ಗೆ ಸಮುದ್ರದ ದಡದಲ್ಲಿ ಡಾಲ್ಫಿನ್ ಬಿದ್ದಿರುವುದನ್ನು ಸ್ಥಳೀಯರು ನೋಡಿದರು. ಡಾಲ್ಫಿನ್ ದೇಹದಲ್ಲಿ ಗಾಯದ ಗುರುತುಗಳಿದ್ದು, ಹಡಗುಗಳ ಬ್ಲೇಡ್ ತಗುಲಿ ಗಾಯವಾಗಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. [ಪಣಂಬೂರು ಬೀಚ್ ನಲ್ಲಿ ದರೋಡೆ]

ಡಾಲ್ಫಿನ್ ದಡದಲ್ಲಿ ಬಿದ್ದಿರುವ ವಿಷಯ ಜನರಿಗೆ ತಿಳಿಯುತ್ತಿದ್ದಂತೆ ನೂರಾರು ಜನರು ಸ್ಥಳಕ್ಕೆ ಆಗಮಿಸಿ ಮೊಬೈಲ್‌ನಲ್ಲಿ ಫೋಟೋ ತೆಗೆದುಕೊಂಡರು. ಸ್ಥಳೀಯರೇ ಡಾಲ್ಫಿನ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಸಮುದ್ರಕ್ಕೆ ಬಿಟ್ಟಿದ್ದಾರೆ. [ಚಿತ್ರಗಳು : ಮಂಗಳೂರಿನ ಪಿಲಿಕುಳದಲ್ಲಿ ಮೀನು ಮೇಳ]

ಪಶುವೈದ್ಯರು ಮತ್ತು ಯಾವುದೇ ಅಧಿಕಾರಿಗಳಿಗೆ ಸ್ಥಳೀಯರು ಡಾಲ್ಫಿನ್ ಬಿದ್ದಿರುವ ಕುರಿತು ಮಾಹಿತಿ ನೀಡಿರಲಿಲ್ಲ. ಚಿಕಿತ್ಸೆ ನೀಡಿ ಅದನ್ನು ಸಮುದ್ರಕ್ಕೆ ಬಿಟ್ಟರೂ ಅದು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.

22 ಲಕ್ಷ ಹಣ ಬಿಡುಗಡೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳ ಸುತ್ತ ತಡೆಗೋಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು 22 ಲಕ್ಷ ಅನುದಾನ ಬಿಡುಗಡೆ ಮಾಡಿದ್ದಾರೆ. ಒಂದು ವಾರದೊಳಗೆ ತಡೆಗೋಡೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಅವರು ಈ ಕುರಿತು ಈಗಾಗಲೇ ಎರಡು ಸುತ್ತಿನ ಸಭೆಗಳನ್ನು ನಡೆಸಿ ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ತಾ. ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ ಕೆಲವು ಕಡೆ ತಡೆಗೋಡೆ ನಿರ್ಮಿಸಿದ ಹಿನ್ನೆಲೆಯಲ್ಲಿ ತಕ್ಷಣ ಹಣ ಬಿಡುಗಡೆ ಮಾಡಿದ್ದಾರೆ.












Click it and Unblock the Notifications