ನಿಮ್ಮ ನಾಲಗೆಯನ್ನು ಎಕ್ಕಡ ರೀತಿ ಬಳಸಿಕೊಳ್ಳಬೇಡಿ: ಆರ್.ಅಶೋಕ್ ವಿರುದ್ಧ ಭಜರಂಗದಳ ಕೆಂಡಾಮಂಡಲ
ಮಂಗಳೂರು, ಫೆಬ್ರವರಿ 21: ವಿಧಾನಮಂಡಲ ಅಧಿವೇಶನಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಂಗಳೂರಿನ ಪಬ್ ಹಾಗೂ ಚರ್ಚ್ ದಾಳಿ ಘಟನೆಯ ಬಗ್ಗೆ ಹೇಳಿಕೆ ವಿರುದ್ಧ ಬಜರಂಗದಳ ಕಿಡಿಕಾರಿದೆ.
ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂದರ್ಭದಲ್ಲಿ ಎಷ್ಟೇ ಒತ್ತಡವಿದ್ದರೂ ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ದಕ್ಷಿಣ ಕನ್ನಡ ಜಿಲ್ಲೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ, ಬಿಜೆಪಿ ನಾಯಕ ಆರ್. ಅಶೋಕ್ ಅವರನ್ನು ಅಡ್ಜೆಸ್ಟ್‌ಮೆಂಟ್ ಅಶೋಕ್ ಎಂದು ಕಿಡಿಕಾರಿದ್ದಾರೆ.
ಪುನೀತ್ ಅತ್ತಾವರ ಫೇಸ್‌ಬುಕ್ ಪೋಸ್ಟ್‌ನಲ್ಲಿರುವುದೇನು..?
ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..!!
ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.
ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ ಎಂದು ಪುನೀತ್ ಅತ್ತಾವರ ಆಗ್ರಹಿಸಿದ್ದಾರೆ.
ಇನ್ನು ಪ್ರತಿಪ ಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications