ನವೆಂಬರ್ 13ರಂದು ಕರ್ನಾಟಕ ಬಂದ್?
ಮಂಗಳೂರು, ನವೆಂಬರ್ 11 : ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಮತ್ತು ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ನವೆಂಬರ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಜಂಟಿಯಾಗಿ ನವೆಂಬರ್ 13ರ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಹಿಂದೂಗಳ ಮೇಲೆ ರಾಜ್ಯಾದ್ಯಂತ ನಡೆಯುತ್ತಿರುವ ದೌರ್ಜನ್ಯ ಮತ್ತು ಹತ್ಯೆಯನ್ನು ಖಂಡಿಸಿ ಬಂದ್ ಕರೆ ನೀಡಲಾಗಿದೆ ಎಂದು ಭಜರಂಗದಳ ತಿಳಿಸಿದೆ. [ಮೂಡಬಿದಿರೆ ಪ್ರಶಾಂತ್ ಪೂಜಾರಿ ಹತ್ಯೆಗೆ ಕಾರಣವೇನು?]

'ಕೊಡಗು, ಉಡುಪಿ ಹಾಗೂ ಮಂಗಳೂರು ಬಂದ್‌ಗೆ ಗುರುವಾರವೇ ಕರೆ ನೀಡಲಾಗಿತ್ತು. ಆದರೆ, ಈ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದುಕೊಳ್ಳಲಾಗಿದ್ದು ಶುಕ್ರವಾರ ಕರ್ನಾಟಕ ಬಂದ್ ನಡೆಸಲಾಗುತ್ತದೆ' ಎಂದು ಭಜರಂಗದಳದ ರಾಜ್ಯ ಸಂಚಾಲಕ ಶರಣ್ ಪಂಪ್ವೆಲ್ ಹೇಳಿದ್ದಾರೆ. [ಮೂಡಬಿದಿರೆಯಲ್ಲಿ ಬೆಳ್ಳಂಬೆಳಗ್ಗೆ ಹೂವಿನ ವ್ಯಾಪಾರಿ ಹತ್ಯೆ]
ಟಿಪ್ಪು ಜಯಂತಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ.
'ಈ ಎಲ್ಲಾ ಘಟನೆಗಳನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಮಂಗಳೂರು, ಉಡುಪಿ, ಕೊಡಗಿನಲ್ಲಿ ಬಂದ್ ನಡೆಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ' ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.












Click it and Unblock the Notifications