ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಹಿಂಪ ನೇತೃತ್ವದಲ್ಲಿ ನ.25ರಂದು ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಜನಾಗ್ರಹ ಸಭೆ

|
Google Oneindia Kannada News

ಮಂಗಳೂರು, ನವೆಂಬರ್.21: ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಹಾಗೂ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಸತ್ತಿನಲ್ಲಿ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನಾಗ್ರಹ ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನಿರ್ಧರಿಸಿದೆ.

ಇದೇ ಬರುವ ನವೆಂಬರ್. 25ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಜನಾಗ್ರಹ ಸಭೆಯನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್‌ಪಿ ರ‍್ಯಾಲಿರಾಮಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ವಿಎಚ್‌ಪಿ ರ‍್ಯಾಲಿ

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಜನಾಗ್ರಹ ಸಭೆಯಲ್ಲಿ ಬಜರಂಗದಳದ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

VHP holding Rally for Ram Mandir Construction on November 25

ಈ ಬೃಹತ್ ಜನಾಗ್ರಹ ಸಭೆಗೆ ಹಿಂದೂ ಜಾಗರಣ ವೇದಿಕೆ, ಹಿಂದೂ ಯುವಸೇನೆ , ಶ್ರೀರಾಮ ಸೇನೆ ಸೇರಿದಂತೆ ಇನ್ನಿತರ ಹಿಂದೂಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಭೆಯಲ್ಲಿ ಆರ್ ಎಸ್ ಎಸ್ ಪ್ರಮುಖರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ.25 ರಂದು ಬೃಹತ್ ಜನಾಗ್ರಹ ಸಮಾವೇಶ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ನ.25 ರಂದು ಬೃಹತ್ ಜನಾಗ್ರಹ ಸಮಾವೇಶ

ಜನಾಗ್ರಹ ಸಭೆಯ ಪೂರ್ವಭಾವಿಯಾಗಿ ನವೆಂಬರ್. 22ರಂದು ಜಿಲ್ಲೆಯ 8 ಕ್ಷೇತ್ರಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಲಿದೆ. ಕಾರ್ಯಕರ್ತರು ಮನೆ ಮನೆ ಸಂಪರ್ಕ ಮೂಲಕ ರಾಮಮಂದಿರ ನಿರ್ಮಾಣ ಅಭಿಯಾನ ನಡೆಸಲಿದ್ದಾರೆ ಎಂದು ತಿಳಿಸಿದರು.

 ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ ರಾಮಮಂದಿರ ನಿರ್ಮಿಸದಿದ್ದರೆ ಬಿಜೆಪಿ ವಿರುದ್ಧ ಮತ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರನ್ನು ಬಂಧಿಸುವ ಮೂಲಕ ಹಿಂದೂಗಳ ಭಾವನೆಗೆ ಬೆಲೆ ಇಲ್ಲದ ರೀತಿಯಲ್ಲಿ ಕೇರಳ ಸರಕಾರ ವರ್ತಿಸುತ್ತಿದೆ. ಆದ್ದರಿಂದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಶಬರಿಮಲೆ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ವಿವಾದ ಪರಿಹರಿಸಬೇಕು ಎಂದು ಶರಣ್ ಪಂಪ್ ವೆಲ್ ಒತ್ತಾಯಿಸಿದರು.

English summary
Vishwa Hindu Parishad and Bajarangadala planning to hold 4 mega public meeting by religious leaders in Mangaluru vibhaga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X