ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯನ್ನು ಪ್ರಧಾನಿಯೆಂದು ಘೋಷಿಸಲಿ'

|
Google Oneindia Kannada News

ಮಂಗಳೂರು, ಏಪ್ರಿಲ್ 09:ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಬಹುಮತ ಸಾಧಿಸಿದರೆ ಗ್ರಾಮ ಗ್ರಾಮಗಳಲ್ಲಿ ಬಜರಂಗದಳವನ್ನು ಆರಂಭಿಸಲಾಗುವುದೆಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೂಡ ಮೋದಿಯ ಕುರಿತು ಮಾತನಾಡುತ್ತಿದ್ದಾರೆ. ಈ ಮೂಲಕ ಮೋದಿ ಅವರ ಸಾಮರ್ಥ್ಯ ಅನಾವರಣಗೊಂಡಿದೆ ಎಂದು ಹೇಳಿದರು.

ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ

ಬಿಜೆಪಿ ಪಕ್ಷವು ಯಾವುದೇ ಜಾತಿಗೆ ಸೀಮಿತವಾಗಿ ಯೋಚನೆ ಮಾಡದೆ ಎಲ್ಲಾ ಜಾತಿಯವರನ್ನು ಗೌರವಿಸುತ್ತದೆ ಹಾಗೂ ಪ್ರೀತಿಸುತ್ತದೆ. ರಾಷ್ಟ್ರದ ಏಳಿಗೆ, ಹಿಂದುತ್ವ ಹಾಗೂ ಅಭಿವೃದ್ಧಿಗಾಗಿ ನಾಡಿನ ಜನತೆ ಮೋದಿಯನ್ನು ಬಯಸಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.

Bajrang dal units would be formed in every village after election:Sunil Kumar

ಕಾಂಗ್ರೆಸ್ ಮುಖಂಡರು ನಮ್ಮನ್ನು ಮೋದಿಯ ಹೆಸರು ಹೇಳಿ ಮತ ಕೇಳುತ್ತಿದ್ದೇವೆ ಎಂದು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯನ್ನು ಪ್ರಧಾನಿ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.

 ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ! ಕರಾವಳಿಯಲ್ಲಿ ಕೇಸರಿ ಪಡೆಗೆ ಮೋದಿ ಹೆಸರಿನಲ್ಲಿ ಮತ ಕೇಳುವ ಅನಿವಾರ್ಯತೆ!

ಪ್ರಧಾನಿ ನರೇಂದ್ರ ಮೋದಿ, ಅವರು ಏಪ್ರಿಲ್ 13ರಂದು ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಸಭೆಗೆ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.

English summary
In Puttur Karkala MLA Sunil Kumar said that Bajrang dal units would be formed in every village after election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X