ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕು ದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ

|
Google Oneindia Kannada News

ಮಂಗಳೂರು, ಡಿಸೆಂಬರ್ 15: ನಾಡಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಾಲ್ಕು ದಿನಗಳ ಕಾಲ ಭಕ್ತರ ಪ್ರವೇಶವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಡಿ.17 ರಿಂದ ಡಿ.20ರ ವರೆಗೆ ಭಕ್ತರ ಪ್ರವೇಶ ನಿಷೇಧ ಹೇರಲಾಗಿದೆ.

ಕರಾವಳಿ ಭಾಗದ ಜನರ ಬೇಡಿಕೆ ಈಡೇರಿಸಿದ ಕೊಂಕಣ ರೈಲ್ವೆಕರಾವಳಿ ಭಾಗದ ಜನರ ಬೇಡಿಕೆ ಈಡೇರಿಸಿದ ಕೊಂಕಣ ರೈಲ್ವೆ

ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಕುಕ್ಕೆ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಆದಾಯದಲ್ಲೂ ಮುಂಚೂಣಿಯಲ್ಲಿರುವ ದೇವಸ್ಥಾನ ಇದಾಗಿದೆ.

 Mangaluru: Ban On Devotees Entry At Kukke Shri Subrahmanya Temple From December 17-20

ಮುಂಗಡ ನೋಂದಣಿ ಮಾಡಿಸಿದ ಭಕ್ತರಿಗೆ ಕೇವಲ ರಥೋತ್ಸವ ಸೇವೆಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿ ಯತೀಶ್ ಉಳ್ಳಾಲ್ ವಿನಂತಿ ಮೇರೆಗೆ ಮುಂಗಡ ನೋಂದಣಿ ಅವಕಾಶ ಪ್ರಕಟಣೆ ಹೊರಡಿಸಿದ್ದು, 50 ಸಾವಿರಕ್ಕೂ ಹೆಚ್ಚಿನ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

English summary
The Dakshina Kannada District Collector has issued an order banning the entry for devotees to the Kukke Subramanya temple for four days
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X