ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲು ವಿಎಚ್‌ಪಿ ಆಗ್ರಹ

ಮಂಗಳೂರು, ಅ.16 : ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಪಟ್ಟಿಯಲ್ಲಿ ಸೇರಿಸಿ ಕಾನೂನು ಕ್ರಮ ಕೈ ಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್, ಬಜರಂಗದಳ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಬುಧವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಅವರು, 'ಮೂಡುಬಿದಿರೆ ಪ್ರಶಾಂತ್ ಪೂಜಾರಿ, ಬೆಂಗಳೂರಿನಲ್ಲಿ ರುದ್ರೇಶ್, ಮೈಸೂರಿನ ರಾಜು, ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಲ್ಲಿ ಪಿಎಫ್ಐ ಕಾರ್ಯಕರ್ತರ ಬಂಧನವಾಗಿದೆ' ಎಂದು ಹೇಳಿದರು.

Ban PFI VHP urges government

'ಕಳೆದ ಎರಡು ವರ್ಷಗಳಿಂದ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಗಳಲ್ಲಿ ಪಿಎಫ್ಐ ಸಂಘಟನೆ ಕೈವಾಡ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಒಂದು ದೇಶದ್ರೋಹಿ ಸಂಘಟನೆಯಾಗಿದ್ದು ಅದನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

'ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇನ್ನುಳಿದ ಮೂರು ಮಂದಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು' ಎಂದು ಒತ್ತಾಯಿಸಿದರು.

'ಶರತ್ ಮಡಿವಾಳ್ ಹತ್ಯೆ ಪ್ರಕರಣದ ಮೂಲವನ್ನು ಭೇದಿಸಬೇಕು ಎಂದು ಹೇಳಿದ ಅವರು ಆರೋಪಿಗಳಿಗೆ ಆರ್ಥಿಕ ಸಹಾಯ ಹಾಗೂ ಇತರ ಸಹಾಯ ಹಸ್ತ ಚಾಚಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+