ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರಿ ಮಳೆ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಲಾಕ್

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂ.30: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಹೆದ್ದಾರಿಯಲ್ಲಿ ಕಿಲೋಮೀಟರ್ ನಷ್ಟು ವಾಹನ ದಟ್ಟಣೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ.

ಮಕ್ಕಳು ಶಾಲೆಗೆ ತೆರಳಲು ಕಷ್ಟಕರವಾದ, ದುರ್ಗಮ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಈಗಾಗಲೇ ಶಾಲೆಗಳಿಗೆ ತೆರಳಿರುವ ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಉಳಿಸಿಕೊಳ್ಳುವಂತೆ ಹಾಗೂ ಮನೆಗೆ ವಾಪಾಸ್ ಕಳುಹಿಸದಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ತಾಲೂಕು ವ್ಯಾಪ್ತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈ ಗೊಳ್ಳುವಂತೆ ತಹಸೀಲ್ದಾರ್ ಮತ್ತು ಬಿಇಒಗಳು ಸೂಚನೆ ನೀಡಲಾಗಿದೆ. ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ -ಮಡಿಕೇರಿ ಗಡಿಭಾಗದಲ್ಲಿ ಭೂಕಂಪಕ್ಕೆ ಕಾರಣವೇನು? ಫ್ರೊ.ಕೆ.ವಿ.ರಾವ್ ಮಾಹಿತಿದಕ್ಷಿಣ ಕನ್ನಡ ಜಿಲ್ಲೆ -ಮಡಿಕೇರಿ ಗಡಿಭಾಗದಲ್ಲಿ ಭೂಕಂಪಕ್ಕೆ ಕಾರಣವೇನು? ಫ್ರೊ.ಕೆ.ವಿ.ರಾವ್ ಮಾಹಿತಿ

ಈ ನಡುವೆ ಮಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ನೀರು ಹರಿಯುವ ತೋಡಿನ ಸಾಮರ್ಥ್ಯಕ್ಕಿಂತ ಹೆಚ್ಚಿನ ನೀರು ಹರಿದ ಹಿನ್ನೆಲೆಯಲ್ಲಿ ಕೋಡಿಗಳು ತುಂಬಿ ಹರಿದಿದ್ದು, ಹಲವಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿತ್ತು. ನಗರದ ಪಡೀಲ್, ಕಣ್ಣೂರು, ಅಡ್ಯಾರ್, ಮರೋಳಿ, ಮೊದಲಾದೆಡೆಗಳಲ್ಲಿ ಹೆದ್ದಾರಿಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ಕಾವೂರು ಗಾಂಧಿ ನಗರದಲ್ಲಿ ಕೋಡಿ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿದೆ.

Bangalore National Highway Block due to heavy rainfall

ತಗ್ಗು ಪ್ರದೇಶಗಳು ಮುಳುಗಡೆ

ಮಂಗಳೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮರವೂರು ಸೇತುವೆಯ ಬಟ್ಟೆ ಭಾಗದ ರಸ್ತೆ ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಪಡೀಲು ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗಿದೆ. ನೀರು ಮಾರ್ಗ ಬದನಡಿ ಕ್ಷೇತ್ರ ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.

ಗೋವಾದಲ್ಲಿ ಸ್ನೇಹಿತರೊಂದಿಗೆ ಮೋಜು, ಮಸ್ತಿ-ಹಣ ಖಾಲಿ ಆದಾಗ ಕಿಡ್ನಾಪ್ ನಾಟಕಗೋವಾದಲ್ಲಿ ಸ್ನೇಹಿತರೊಂದಿಗೆ ಮೋಜು, ಮಸ್ತಿ-ಹಣ ಖಾಲಿ ಆದಾಗ ಕಿಡ್ನಾಪ್ ನಾಟಕ

ನಿನ್ನೆ ರಾತ್ರಿಯಿಂದಲೇ ಭಾರಿ ಗಾಳಿ, ಮಳೆ ಆರಂಭವಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ.ಇದರ ಪ್ರಭಾವದಿಂದ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಎರಡು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ನಿನ್ನೆಯೇ ಮುನ್ಸೂಚನೆ ನೀಡಿತ್ತು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಹ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Bangalore National Highway Block due to heavy rainfall

ಇಂದು ಯೆಲ್ಲೋ ಅಲರ್ಟ್ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬಂದಿದ್ದರೆ ಎಲ್ಲಾ ಮುಂಜಾಗ್ರಥೆ ವಹಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಮಕ್ಕಳು ಶಾಲೆಗ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

English summary
mangalore-bangalore national highway is blocked by heavy rains across thedakshina Kannada district from last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X