ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಕಟೀಲ್‌ ಆರೋಗ್ಯ ವಿಚಾರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು, ನವೆಂಬರ್‌, 19: ಅನಾರೋಗ್ಯದ ಹಿನ್ನೆಲೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣದ ಹಿನ್ನೆಲೆ ಮಂಗಳೂರು ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಭೇಟಿ ಆದರು. ಈ ವೇಳೆ ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ಶಾಸಕ ಡಾ.ವೈ.ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಮಯ್ಯ ಗೌಡರ ಪ್ರತಿಮೆ ಅನಾವರಣ

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಿನ್ನೆಲೆ ಸ್ವಾತಂತ್ರ್ಯದ 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸುಳ್ಯದಿಂದ ರೈತರ ಸೈನ್ಯ ಕಟ್ಟಿಕೊಂಡು ಮಂಗಳೂರಿನವರೆಗೂ ಬ್ರಿಟೀಷರನ್ನು ಹಿಮ್ಮೆಟ್ಟಿಸಿದ ರಾಮಯ್ಯಗೌಡರ ಪ್ರತಿಮೆಯನ್ನು ಶನಿವಾರ (ನವೆಂಬರ್‌ 19) ಸಿಎಂ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ. ಮಂಗಳೂರಿನ ಹೃದಯ ಭಾಗದಲ್ಲಿರುವ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್‌ನಲ್ಲಿ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿಯ ಡಾ.ನಿರ್ಮಲಾನಂದ ಶ್ರೀಗಳು, ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ.

Basavaraj Bommai inquired about Nalin kumar Kateel health in A.J.hospital of Mangaluru

ನಿರ್ವಹಣೆ ಇಲ್ಲದೆ ಪಾಳು ಬಿದ್ದಿದ್ದ ಪಾರ್ಕ್‌

ಗುಡ್ಡೆಯ ಟಾಗೋರ್ ಪಾರ್ಕ್ ಇಷ್ಟು ದಿನ ನಿರ್ವಹಣೆ ಇಲ್ಲದೆ ಪಾಳು ಬಿದ್ದಿತ್ತು. ಇದೀಗ ಪ್ರತಿಮೆ ಅನಾವರಣ ಮಾಡುವ ಹಿನ್ನೆಲೆ ಪಾರ್ಕ್‌ಗೆ ಹೊಸ ಕಳೆ ಬಂದಂತಾಗಿದೆ. ಜಿಲ್ಲಾಡಳಿತ, ಪಾಲಿಕೆ ಪ್ರತಿಮೆ ಹಾಗೂ ಪಾರ್ಕ್‍ನ ನಿರ್ಮಾಣದ ಕೆಲಸ ಮಾಡಿದ್ದು, ಯಾವುದೇ ತೊಂದರೆ ಆಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಜವಾಬ್ದಾರಿ ನೀಡಲಾಗಿತ್ತು. ಆದ್ದರಿಂದ ಪಾಲಿಕೆ, ಜಿಲ್ಲಾಡಳಿತ ಕಾರ್ಯಕ್ರಮದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+