'ಗೋಮಾಂಸ ತಿನ್ನುತ್ತೇನೆ ಎಂದ ಸಿಎಂ ಕ್ಷಮೆಯಾಚಿಸಲಿ'
ಮಂಗಳೂರು, ಅಕ್ಟೋಬರ್. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಧಿಕ್ಕರಿಸಿ, ನಾನು ಈವರೆಗೆ ಗೋಮಾಂಸ ತಿಂದಿಲ್ಲ, ಇನ್ನು ಮುಂದೆ ತಿನ್ನುತ್ತೇನೆ ಎಂದಿರುವುದನ್ನು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಖಂಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಉದ್ದಟ, ಬೇಜವಾಬ್ದಾರಿಯ ಮತ್ತು ವಿಷಾದನೀಯ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮಣ್ಣು ಪಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.['ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ']

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಭಾವನೆಗಳನ್ನು ಸಮಾನವಾಗಿ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದ ಸಮಸ್ತ ಪ್ರಜೆಗಳನ್ನು ಸಮಾನವಾಗಿ ಕಾಣುವುದು ಮುಖ್ಯಮಂತ್ರಿಗಳ ಸಾಂವಿಧಾನಿಕ ಕರ್ತವ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಸಂವಿಧಾನದ ಹೆಸರಿನಲ್ಲಿ ಮಾಡಿದ ಪ್ರಮಾಣ ವಚನದ ವಾಕ್ಯಗಳನ್ನು ನೆನಪಿಸುತ್ತಾ, ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಘಾಸಿಗೊಳಿಸಿರುವುದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.[ಗೋಮಾಂಸ ತಿನ್ನಲು ಮುಂದಾದವರಿಗೆ ಜನರ ಪ್ರಶ್ನೆ]
ಈ ರೀತಿಯ ಹೇಳಿಕೆಗಳು ಸಮಾಜದಲ್ಲಿನ ಸಮುದಾಯಗಳ ನಡುವೆ ದ್ವೇಷ ಹಾಗೂ ಅಶಾಂತಿಯ ವಾತಾವರಣ ಸೃಷ್ಟಿಸುವ ಸಾಧ್ಯತೆಯಿದೆ. ಮುಖ್ಯಮಂತ್ರಿ ತಮ್ಮ ಹೇಳಿಕೆಯನ್ನು ಕೂಡಲೆ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.











Click it and Unblock the Notifications