ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ತಡೆ

ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆದೇಶಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

|
Google Oneindia Kannada News

ಮಂಗಳೂರು, ಏಪ್ರಿಲ್ 12 : ಉಜಿರೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆದೇಶಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ಪ್ರಕರಣ ರದ್ದುಕೋರಿ ಸಾಕ್ಷಿಗಳಾದ ಧೀರಜ್ ಜೈನ್, ಉದಯ್ ಜೈನ್ ಹಾಗೂ ಮಲ್ಲಿಕ್ ಜೈನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.[ಸೌಜನ್ಯ ಕೊಲೆ: ವೀರೇಂದ್ರ ಹೆಗ್ಗಡೆ ಸಂಬಂಧಿಕರ ಕೈವಾಡ, ಆರೋಪ]

Beltangady Sowjanya murder case, karnataka high court stays further probe

ಅಲ್ಲದೇ ಸಿಬಿಐ ತನಿಖಾ ಸಂಸ್ಥೆ ಮತ್ತು ದೂರುದಾರರಾದ ಸೌಜನ್ಯಾ ತಂದೆ ಚಂದಪ್ಪಗೌಡಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು.

ಅರ್ಜಿದಾರರ ಪರ ವಕೀಲ ಪಿ.ಪಿ.ಹೆಗ್ಡೆ, 'ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ದೋಷಾ ರೋಪ ಪಟ್ಟಿಯಲ್ಲಿ ಅರ್ಜಿದಾರರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ' ಎಂದರು.

'ಒಂದು ಬಾರಿ ಸಮಗ್ರವಾದ ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಮರು ತನಿಖೆಗೆ ಆದೇಶಿಸಲು ಕಾನೂನಿನಲ್ಲಿ ಅವಕಾಶವಿಲ್ಲ' ಎಂದು ವಿವರಿಸಿದರು.

'ಸಿಬಿಐ ನ್ಯಾಯಾಲಯ ಸೌಜನ್ಯಾ ಕೊಲೆ ಪ್ರಕರಣದ ತನಿಖೆಗೆ ಆದೇಶಿಸಿದ ಕ್ರಮ ಕಾನೂನು ಬಾಹಿರವಾಗಿದ್ದು, ಆ ಆದೇಶ ರದ್ದುಪಡಿಸಬೇಕು. ಪ್ರಕರಣದ ಮರು ತನಿಖೆಗೆ ತಡೆಯಾಜ್ಞೆ ನೀಡಬೇಕು' ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು ವಿಚಾರಣೆಗೆ ತಡೆ ನೀಡಿ, ಪ್ರತಿವಾದಿಗಳಾದ ಸಿಬಿಐ, ದೂರುದಾರರಾದ ಸೌಜನ್ಯಾಳ ತಂದೆ ಚಂದಪ್ಪ ಗೌಡ ಅವರಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿದರು.

ಧರ್ಮಸ್ಥಳ ಮತ್ತು ಉಜಿರೆ ಮಧ್ಯದ ರಸ್ತೆಯಲ್ಲಿ ನೇತ್ರಾವತಿ ನದಿ ಸಮೀಪ 2012ರ ಅಕ್ಟೋಬರ್ 9ರಂದು ಸೌಜನ್ಯಾ ಶವ ಪತ್ತೆಯಾಗಿತ್ತು.

English summary
The karnataka high court on Tuesday April 11, granted stay on the CBI’s further investigation into the sensational rape and murder case of Sowjanya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X