ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂ-ಮಂಗಳೂರು ರೈಲು ರದ್ದು; ಜನರ ಆಕ್ರೋಶ, ಇಲಾಖೆಗೆ ಪತ್ರ

|
Google Oneindia Kannada News

ಮಂಗಳೂರು, ಅಕ್ಟೋಬರ್ 07 : ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಸೆಂಟ್ರಲ್ ನಡುವೆ ಸಂಚಾರ ನಡೆಸುತ್ತಿದ್ದ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದು ಮಾಡುವುದಾಗಿ ಘೋಷಣೆ ಮಾಡಿದೆ. ಕರಾವಳಿ ಭಾಗದ ಜನರು ಈ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಯಾಣಿಕರ ಕೊರತೆ ಹಿನ್ನಲೆಯಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ಘೋಷಣೆ ಮಾಡಿದೆ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ನಡೆಸುತ್ತಿತ್ತು.

ಬೆಂ-ಮಂಗಳೂರು ರೈಲು ಸಂಚಾರದಲ್ಲಿ ಭಾರಿ ಬದಲಾವಣೆಬೆಂ-ಮಂಗಳೂರು ರೈಲು ಸಂಚಾರದಲ್ಲಿ ಭಾರಿ ಬದಲಾವಣೆ

ಅಕ್ಟೋಬರ್ 7ರಿಂದ ಬೆಂಗಳೂರು-ಮಂಗಳೂರು ವಿಶೇಷ ರೈಲು, ಮಂಗಳೂರು ಸೆಂಟ್ರಲ್-ಬೆಂಗಳೂರು ನಡುವಿನ ಸಂಚಾರ ಅಕ್ಟೋಬರ್ 11ರಿಂದ ಸ್ಥಗಿತಗೊಳ್ಳಲಿದೆ ಎಂದು ರೈಲ್ವೆ ಹೇಳಿತ್ತು. ಇದಕ್ಕೆ ಕರಾವಳಿ ಭಾಗದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಮುಂಗಡ ಟಿಕೆಟ್ ಬುಕ್ಕಿಂಗ್; ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಮುಂಗಡ ಟಿಕೆಟ್ ಬುಕ್ಕಿಂಗ್; ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

Bengaluru Mangaluru Central Special Express Train Cancelled People Upset

ಕೋವಿಡ್ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ ಎಂದು ರೈಲುಗಳ ಸಂಚಾರ ರದ್ದುಗೊಳಿಸುವುದು ಸರಿಯಲ್ಲ. ಇದರಿಂದಾಗಿ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಲಿದೆ ಎಂದು ಜನರು ಹೇಳಿದ್ದಾರೆ. ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಸಹ ಈ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಕೇಂದ್ರ ರೈಲ್ವೆ ಸಚಿವರಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ" ಎಂದು ಹೇಳಿದ್ದಾರೆ.

ಮಂಗಳೂರು ಸೆಂಟ್ರಲ್-ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದು ಮಾಡಾಗಿದೆ. ಕೆಎಸ್ಆರ್ ಬೆಂಗಳೂರು-ಮಂಗಳೂರು ಸೆಂಟ್ರಲ್ ನಡುವೆ ವಾರಕ್ಕೆ ಮೂರು ಬಾರಿ (ಮೈಸೂರು) ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.

ಬದಲಾದ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 7ರಿಂದ ಕೆಎಸ್ಆರ್ ಬೆಂಗಳೂರು-ಮಂಗಳೂರು ಸೆಂಟ್ರಲ್ ರೈಲು ನಂಬರ್ 06517 ಬುಧವಾರ, ಶುಕ್ರವಾರ ಮತ್ತು ಭಾನುವಾರ ಬೆಂಗಳೂರು ನಗರದಿಂದ ಸಂಚಾರ ನಡೆಸಲಿದೆ.

ರೈಲು ನಂಬರ್ 06518 ಮಂಗಳೂರು ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಾರದಲ್ಲಿ ಮೂರು ದಿನ ಗುರುವಾರ, ಶನಿವಾರ ಮತ್ತು ಸೋಮವಾರ ಮಂಗಳೂರಿನಿಂದ ಸಂಚಾರ ನಡೆಸಲಿದೆ.

Recommended Video

ಒನ್‌ ಇಂಡಿಯಾ ಫಲಶ್ರುತಿ: ನೀಗಿತು ಹಾಸ್ಮಿನಗರ ಬಡಾವಣೆ ಜನರ ಬವಣೆ.. ವಿದ್ಯುತ್ ಕಂಬ, ತಂತಿಗಳ ತ್ವರಿತ ದುರಸ್ತಿ

ರಾಜಧಾನಿ ಬೆಂಗಳೂರು-ಮಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ಹಲವ ತಾಸುಗಳ ಕಾಲ ಪ್ರಯಾಣ ಮಾಡಬೇಕು. ಆದ್ದರಿಂದ, ಜನರು ರೈಲನ್ನು ಅವಲಂಬಿಸಿದ್ದರು. ಆದರೆ, ಪ್ರಯಾಣಿಕರ ಕೊರತೆಯ ನೆಪ ಹೇಳಿ ರೈಲ್ವೆ ರೈಲು ಸಂಚಾರ ರದ್ದು ಮಾಡುತ್ತಿದೆ.

English summary
People upset after south western railway suspended the Bengaluru-Mangaluru Central special express train.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X