ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕೆಂದು ದೇವರ ಮೊರೆ ಹೋದ ಉಡುಪಿ ಬಿಜೆಪಿ ಕಾರ್ಯಕರ್ತರು

ಉಡುಪಿ, ಮಾರ್ಚ್ 14:ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯರ ಧ್ವನಿ ಗಟ್ಟಿಗೊಳ್ಳುತ್ತಿದೆ. ಬಿಜೆಪಿ ಕಾರ್ಯಕರ್ತರಲ್ಲಿ ದಿನದಿಂದ ದಿನಕ್ಕೆ ಅಸಮಾಧಾನ ಹೆಚ್ಚುತ್ತಿದೆ. ಈ ಮೊದಲು ಶೋಭಾ ಗೋ ಬ್ಯಾಕ್ ಅಭಿಯಾನ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಈಗ ದೇವರ ಮೊರೆ ಹೋಗಿದ್ದಾರೆ.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು ಎಂದು ಕೃಷ್ಣಮಠದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಹಾಲಿ ಸಂಸದೆಯ ವಿರುದ್ಧ ಆಕ್ರೋಶಗೊಂಡಿರುವ ಬಿಜೆಪಿಯ ಕಾರ್ಯಕರ್ತರು, ದೇವರ ಮೊರೆ ಹೋಗಿದ್ದು ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡಿದ್ರೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಅನುಕೂಲ. ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

BJP activists urged ticket for Jayaprakash Hegde

ಶೋಭಾ ಕರಂದ್ಲಾಜೆ ಸಂಭವನೀಯ ಅಭ್ಯರ್ಥಿಯಾಗಿರುವುದರಿಂದ ಪಕ್ಷೀಯರಿಂದಲೇ ವಿರೋಧವಾಗುತ್ತಿರುವುದು ಶೋಭಾ ಕರದ್ಲಾಜೆ ಅವರಿಗೆ ನುಂಗಲಾರದ ತುತ್ತಾಗಿದೆ.

ಪಕ್ಷದ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ನೀಡುವಂತೆ ಹೈಕಮಾಂಡ್ ಗೆ ಆಗ್ರಹಿಸಿರುವ ಬಿಜೆಪಿ ಕಾರ್ಯಕರ್ತರು, ಜನರ ಕೈಗೆ ಸಿಗದೇ ಇರುವ ಸಂಸದೆ ಶೋಭಾ ಕರದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+