ಹಿಂದೂ ವಿಚಾರ ಧಾರೆ, ಸಂಘಟನೆ ಶಕ್ತಿ ಮೇಲೆ ಈ ಬಾರಿ ಗೆಲುವು: ನಳಿನ್

ಮಂಗಳೂರು ಏಪ್ರಿಲ್ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ನಡುವೆ ಬಿಜೆಪಿ ತಮ್ಮ ಜಿಲ್ಲಾ ಚುನಾವಣಾ ಕಚೇರಿಯನ್ನು ಮಂಗಳೂರಿನಲ್ಲಿ ಆರಂಭಿಸಿದೆ.

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಮಂಗಳೂರಿನಲ್ಲಿ ಇಂದು ನಡೆಯಿತು. ಬಿಜೆಪಿಯ ಹಿರಿಯ ಮುಖಂಡ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಅವರು ಚುನಾವಣಾ ಕಾರ್ಯಲಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಹಿಂದುತ್ವ, ಹಿಂದೂ ವಿಚಾರ ಧಾರೆ ಮತ್ತು ಸಂಘಟನಾತ್ಮಕ ಶಕ್ತಿಯ ಆಧಾರದ ಮೇಲೆ ಈ ಬಾರಿಯ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

BJP district election office inaugurated in Mangaluru

ಕಾಂಗ್ರೆಸ್ ಪಕ್ಷದಂತೆ ನಾವು ಜಾತಿ ಹೆಸರಿನಲ್ಲಿ ಮತ ಕೇಳಲ್ಲ. ಅಭ್ಯರ್ಥಿ ಆಯ್ಕೆಯಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಉಳಿದವರಂತೆ ವಾಟ್ಸಾಪ್ , ಫೇಸ್ಬುಕ್ ನಲ್ಲಿರುವವರಿಗೆ ಮಾತ್ರ ಗೊಂದಲಗಳಿವೆ ಎಂದು ವ್ಯಂಗ್ಯವಾಡಿದರು. ಈ ಬಾರಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕರಾದ ರುಕ್ಮಯ ಪೂಜಾರಿ , ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ದ್ವೇಷದ ರಾಜಕಾರಣ, ಜಾತಿ- ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ," ಎಂದು ಕಿಡಿಕಾರಿದರು .

BJP district election office inaugurated in Mangaluru

ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಜನರ ನೆಮ್ಮದಿಯ ಬದುಕಿಗೆ ಬಿಜೆಪಿಯನ್ನು ಆಡಳಿತಕ್ಕೆ ತರುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

BJP district election office inaugurated in Mangaluru

ಕಾರ್ಯಕ್ರಮದಲ್ಲಿ ಕೇರಳ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಸುಲೋಚನಾ ಭಟ್ ಮತ್ತಿತರ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+