ಇಲ್ಲಿನ ರಾಜಕೀಯ ವಿದ್ಯಮಾನಗಳಿಗೆ ಬಿಜೆಪಿಯೇ ನೇರ ಹೊಣೆ– ಐವನ್ ಡಿಸೋಜಾ
ಮಂಗಳೂರು, ಜುಲೈ 13: ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ವಿದ್ಯಮಾನಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವೊಡ್ಡಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಪರೇಷನ್ ಕಮಲದ ಯತ್ನದಲ್ಲಿ 2009ರಲ್ಲಿ ಯಶಸ್ವಿಯಾಗಿದ್ದ ಬಿಜೆಪಿ, 2013ರಲ್ಲಿ ವಿಪಕ್ಷ ಸ್ಥಾನವನ್ನು ಅನುಭವಿಸಬೇಕಾಯಿತು. ಚುನಾಯಿತ ಪ್ರತಿನಿಧಿಗಳು ಒಂದು ಪಕ್ಷದಿಂದ ಮತ್ತೊಂದು ಪಕ್ಷವನ್ನು ಸೇರುವುದು ತಪ್ಪಲ್ಲ ಹಾಗೂ ಅದು ಅಸ್ವಾಭಾವಿಕ ಪ್ರಕ್ರಿಯೆಯೂ ಅಲ್ಲ. ಆದರೆ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾನೂನನ್ನು ಗಾಳಿಗೆ ತೂರಿ ಸದನದ ಬಲ ಕಡಿಮೆ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ಬಿಜೆಪಿ ನಾಯಕರಿಂದ ನಡೆದಿದೆ ಎಂದು ಕಿಡಿಕಾರಿದರು.
ಶಾಸಕರು ವೈಯಕ್ತಿಕ ನೆಲೆಯಲ್ಲಿ ರಾಜೀನಾಮೆ ನೀಡಬೇಕಾದರೂ ಅದು ನೈಜವಾಗಿರಬೇಕು. ಪೊಲೀಸ್ ರಕ್ಷಣೆಯಲ್ಲಿ ಬಂದು ರಾಜೀನಾಮೆ ನೀಡಲು ಪ್ರೇರೇಪಿಸುವಂಥ ಕ್ರಮ ಜನಪ್ರತಿನಿಧಿಗಳು ತಲೆತಗ್ಗಿಸುವಂಥದ್ದು ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ವಿದ್ಯಮಾನಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರೇ ನೇರ ಹೊಣೆ. ಇದರಿಂದ ಬಿಜೆಪಿ ಬಣ್ಣ ಬಯಲಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂಬುದು ಜನತೆಗೆ ಮನದಟ್ಟಾಗಿದೆ ಎಂದು ಹೇಳಿದರು.

ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಇದುವರೆಗೂ ಸ್ಪೀಕರ್ ಸರಿಯಾದ ತೀರ್ಮಾನವನ್ನೇ ಕೈಗೊಂಡಿದ್ದಾರೆ. ಸ್ಪೀಕರ್‌ರವರು ದೇಶಕ್ಕೆ ಮಾದರಿಯಾಗುವ ಐತಿಹಾಸಿಕ ತೀರ್ಮಾನವನ್ನು ನೀಡುವ ನಿರೀಕ್ಷೆ ಇದೆ. ಅತೃಪ್ತ ಶಾಸಕರು ಬಿಜೆಪಿಯ ಬಂಧನದಿಂದ ಬಿಡಿಸಿಕೊಂಡು ಪಕ್ಷಕ್ಕೆ ಹಿಂದಿರುಗಿ ರಾಜೀನಾಮೆ ಹಿಂಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications