ಅರುಣ್ ಕುಮಾರ್ ಪುತ್ತಿಲ ಜೊತೆ ಬಿ.ಎಲ್ ಸಂತೋಷ್ ರಹಸ್ಯ ಸಭೆ!

ಮಂಗಳೂರು, ಜುಲೈ 08: ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ರೆಬೆಲ್ ಆಗಿ, ಬಿಜೆಪಿಯ ಭದ್ರಕೋಟೆಯಲ್ಲೇ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ ಹಿಂದುತ್ವದ ನಾಯಕ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ‌.ಎಲ್ ಸಂತೋಷ್ ದೆಹಲಿಗೆ ಕರೆಸಿ ರಹಸ್ಯ ಸಭೆ ನಡೆಸಿದ್ದಾರೆ.

ಚುನಾವಣಾ ಪೂರ್ವದ ಸನ್ನಿವೇಶ ಮತ್ತು ಚುನಾವಣೆಯ ಬಳಿಕ ವಿಚಾರಗಳನ್ನು ಪುತ್ತಿಲ ಪರಿವಾರದ ಜೊತೆ ಬಿ.ಎಲ್ ಸಂತೋಷ್ ವಿಸ್ಕೃತವಾದ ಸಭೆ ನಡೆಸಿದ್ದಾರೆ. ಜೂನ್ ತಿಂಗಳಲ್ಲಿ ಈ ಸಭೆ ಮಾಡಲಾಗಿದ್ದು, ಸಂತೋಷ್ ಬುಲಾವ್‌ ಮೇರೆಗೆ ಅರುಣ್ ಕುಮಾರ್ ಪುತ್ತಿಲ ಮತ್ತು ಪುತ್ತಿಲ ಪರಿವಾರದ ಐವರು ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

BJP Leader B.L Santhosh Met Arun kumar Puthila

ದೆಹಲಿಯಲ್ಲಿ ಬಿ.ಎಲ್ ಸಂತೋಷ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ, ಭಾಸ್ಕರ್ ಆಚಾರ್ಯ ಹಿಂದಾರು, ಪುತ್ತೂರಿನ ಖ್ಯಾತ ವೈದ್ಯ ಹಾಗೂ ಪುತ್ತಿಲ ಪರಿವಾರದ ಡಾ. ಸುರೇಶ್ ಪುತ್ತೂರಾಯ, ಉದ್ಯಮಿ ಗಣೇಶ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪುತ್ತಿಲ ಪರ ಬ್ಯಾಟ್ ಬೀಸಿದ ರಾಜರಾಮ್ ಬಿ.ಎಲ್ ಪಾಲ್ಗೊಂಡಿದ್ದಾರೆ.

ಪುತ್ತಿಲ ಪರಿವಾರದ ಜೊತೆ ಬಿ.ಎಲ್ ಸಂತೋಷ್, ಎರಡು ಗಂಟೆಗೂ ಅಧಿಕ ಕಾಲ ಸಭೆಯ ನಡೆಸಿದ್ದಾರೆ. ಸಭೆಯಲ್ಲಿ ಸಂತೋಷ್, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವಸ್ತು ಸ್ಥಿತಿಯ ಬಗ್ಗೆ ವಿವರವಾದ ಮಾಹಿತಿ ಪಡೆದಿದ್ದಾರೆ. ಪುತ್ತೂರಿನಲ್ಲಿ ಚುನಾವಣಾ ಪೂರ್ವದಲ್ಲಿ ಬಿಜೆಪಿ ಯಲ್ಲಾದ ಬೆಳವಣಿಗೆಯ ಬಗ್ಗೆಯೂ ಅರುಣ್ ಕುಮಾರ್ ಪುತ್ತಿಲ ಅವರಲ್ಲಿ ಸಂತೋಷ್ ಪಡೆದುಕೊಂಡಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಳಿಕ, ಪಕ್ಷದ ಸಂಘಟನೆಯ ಪ್ರಮುಖರು ಹಲವು ದಿನಗಳ ಕಾಲ ಅಭ್ಯರ್ಥಿ ಪರ ಮತ ಯಾಚನೆಯಲ್ಲಿ ತೊಡಗಿಸಿಕೊಳ್ಳದಿರುವುದು ಹಾಗೂ ಪಕ್ಷದ ಕಾರ್ಯಕರ್ತರನ್ನು ಹುರಿದಂಬಿಸುವ ಕೆಲಸ ಮಾಡದಿರುವ ಬಗ್ಗೆ ಸಂತೋಷ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್, ಬಿಜೆಪಿ ಪಕ್ಷದೊಳಗೆ ಸೇರದ ಬಗ್ಗೆ ಕಾರಣವನ್ನೂ ಕೇಳಿದ್ದಾರೆ. ಬಿಜೆಪಿಯ ಸದಸ್ಯತ್ವ ಪಡೆದು ಬಿಜೆಪಿಯಲ್ಲಿ ಸಕ್ರೀಯ ರಾಗಿ ಸೇವೆ ಸಲ್ಲಿಸಿ, ಹಳೆಯದನ್ನು ಮರೆತು ಪಕ್ಷ ಕಟ್ಟಲು ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್ ಸಹಕಾರ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೇ ಬಿಜೆಪಿ ವಿರುದ್ಧವಾದ ಭಾಷಣಗಳನ್ನು ಮಾಡದೇ ಹಿಂದುತ್ವದ ಮೂಲಮಂತ್ರವನ್ನು ಜಪಿಸಿ, ಮಾಧ್ಯಮಗಳಲ್ಲಿ ಹೇಳಿಕೆ ನೀಡುವಾಗ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ಎಚ್ಚರ ವಹಿಸಿ ಎಂದು ಅರುಣ್ ಕುಮಾರ್ ಪುತ್ತಿಲ ಅವರಿಗೆ ಸಂತೋಷ್ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ಬಿಜೆಪಿ ಭಧ್ರಕೋಟೆ ಮತ್ತು ಸಂಘದ ನೆಲೆಯಲ್ಲೂ ಶಕ್ತಿ ಕೇಂದ್ರ ಆಗಿರುವ ಕಾರಣದಿಂದ ಪುತ್ತೂರಿನಲ್ಲಿ ಕಾರ್ಯಕರ್ತರನ್ನು ಒಂದುಗೂಡಿಸುವ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್ ಮಾತನಾಡಿದ್ದಾರೆ. ಪುತ್ತೂರಿನ ಬಿಜೆಪಿಯ ಅಯಕಟ್ಟಿನಲ್ಲಿರುವ ಮುಖಂಡರುಗಳಿಗೆ ಕಾರ್ಯಕರ್ತರ ಹಿಡಿತವಾಗಲಿ, ಅವರ ಜೊತೆ ಅನ್ಯೋನ್ಯ ಸಂಬಂಧವಾಗಲಿ ಇಲ್ಲದಿರುವುದು ಈ ಚುನಾವಣಾ ಸಂದರ್ಭ ಪಕ್ಷದ ಉನ್ನತ ನಾಯಕರ ಗಮನಕ್ಕೆ ಬಂದಿದೆ.

ಪಕ್ಷ ಅನಿವಾರ್ಯವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲೆಯ ಮುಖಂಡರನ್ನು ಹಾಗೂ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಸ್ವಯಂ ಸೇವಕರನ್ನು ಚುನಾವಣಾ ಪ್ರಚಾರಕ್ಕೆ ಬಹಿರಂಗವಾಗಿ ಬಳಸಿಕೊಳ್ಳಬೇಕಾಗಿ ಬಂದಿತ್ತು. ಸಂಘ ನೇರವಾಗಿ ಚುನಾವಣೆಯಲ್ಲಿ ಗುರುತಿಸಿಕೊಂಡದ್ದು. ಸಂಘದ ಇಮೇಜಿಗೂ ದಕ್ಕೆ ತಂದಿತ್ತು ಎಂದು ಪುತ್ತಿಲ ಪರಿವಾರದ ಜೊತೆ ಸಂತೋಷ್ ಮಾತುಕತೆಯ ವೇಳೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ವಿಧಾನಸಭಾ ಚುನಾವಣೆಯ ಬಳಿಕ ಒಡೆದ ಮನೆಯಾಗಿರುವ ಪುತ್ತೂರು ಬಿಜೆಪಿ ಯನ್ನು ಮತ್ತೆ ಕಟ್ಟಲು ಬಿ‌.ಎಲ್ ಸಂತೋಷ್ ಮುಂದಾಗಿದ್ದಾರೆ. ಪುತ್ತಿಲ ಪರಿವಾರದ ಜೊತೆಗಿನ ಸಂತೋಷ್ ಮಾತುಕತೆ ಸ್ಥಳೀಯ ಬಿಜೆಪಿ ನಾಯಕರ ಅಸಮಾಧಾನಗಳನ್ನು ಹೋಗಲಾಡಿಸುತ್ತದಾ ಎನ್ನುವುದು ಮಾತ್ರ ಯಕ್ಷ ಪ್ರಶ್ನೆ..!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+