ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

ಮಂಗಳೂರು, ಜನವರಿ 3: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎ.ಜೆ.ಆಸ್ಪತ್ರೆಗ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

BJP leader CT Ravi demands Rs 25 lakh compensation for Deepak family

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ತರಬೇತಿ ಪಡೆದಿರುವ ದುರ್ಷರ್ಮಿಗಳಿಂದಲೇ ಈ ರೀತಿಯ ಕೊಲೆ ಮಾಡಲು ಸಾಧ್ಯ," ಎಂದು ಹೇಳಿದ ಅವರು, "ಕಾಂಗ್ರೆಸ್ ನ ಓಟ್ ಬ್ಯಾಂಕ್ ನೀತಿಯೇ ಈ ಕೊಲೆಗಳಿಗೆ ಕಾರಣವಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP leader CT Ravi demands Rs 25 lakh compensation for Deepak family

ದನಕಳ್ಳತನ ಮಾಡುತ್ತಿದ್ದ ಕಬೀರ್ ನ ಸಾವಾದಾಗ ಆತನ ಮನೆಗೆ ತೆರಳಿ ಪರಿಹಾರ ನೀಡಿದ್ದ ರಾಜ್ಯ ಸರಕಾರ ಹಿಂದೂಗಳ ನಿರಂತರ ಕೊಲೆಯಾದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಅವರು ಕಿಡಿಕಾರಿದರು. ದೀಪಕ್ ಹತ್ಯೆಗೆ ಕಾರಣರಾದವರನ್ನು ಶೀಘ್ರ ಬಂಧಿಸಬೇಕು ಎಂದು ಅವರು ಪೋಲೀಸ್ ಇಲಾಖೆಯನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+