ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಮುಖಂಡನ ಅರೆಬೆತ್ತಲೆ ಪ್ರತಿಭಟನೆ
ಮಂಗಳೂರು, ನವೆಂಬರ್ 10: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ರಾಷ್ಟ್ರೀಯವಾದಿ ಕ್ರೈಸ್ತ ಸಂಘಟನೆ ಹಾಗು ಬಿಜೆಪಿ ಮುಖಂಡ ಫ್ರಾಂಕ್ಲಿನ್ ಮೊಂತೇರೋ ಏಕಾಂಗಿಯಾಗಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಟಿಪ್ಪು ಜಯಂತಿ ವೇಳೆ ಮೊಂತೇರೋ, ತಮ್ಮ ಅಂಗಿ ಕಳಚಿ ಪ್ರತಿಭಟನೆ ನಡೆಸಿದರು. ಟಿಪ್ಪು ವಿರುದ್ಧ ಘೋಷಣೆ ಕೂಗಿದ ಅವರು, ಕಪ್ಪು ಬಾವುಟ ಪ್ರದರ್ಶಿಸಿದರು.
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಅದನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದ ಕಾರಣಕ್ಕೆ ಮೊಂತೇರೋ ಅವರನ್ನು ಪೊಲೀಸರು ಬಂಧಿಸಿದರು.

ನಿನ್ನೆ ಸಂಜೆ 6 ಗಂಟೆಯಿಂದ ಶನಿವಾರ ರಾತ್ರಿ 12 ಗಂಟೆಯವರೆಗೂ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ.

ಕಾರ್ಯಕ್ರಮ ವಿರೋಧಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ
ಎರಡು ತುಕಡಿ ಕೆಎಸ್ ಆರ್ ಪಿ ಸೇರಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.












Click it and Unblock the Notifications