ರಾಹುಲ್ ಸುರತ್ಕಲ್ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧ
ಮಂಗಳೂರು, ಮಾರ್ಚ್ 20: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಪ್ರವಾಸ ಆರಂಭವಾಗಿದೆ. ಕಾಂಗ್ರೆಸ್ ಅಧಿನಾಯಕನ ರೋಡ್ ಶೋ ನಡೆಯುವ ಮಂಗಳೂರು , ಕಾಪು, ಪಡುಬಿದ್ರೆ, ಸುರತ್ಕಲ್, ಮುಲ್ಕಿಯನ್ನು ಕಾಂಗ್ರೆಸ್ ಮುಖಂಡರು ಸಂಪೂರ್ಣ ಕಾಂಗ್ರೆಸ್ ಮಯಗೊಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ರೋಡ್ ಶೋ ನಡುವೆ ರಾಹುಲ್ ಗಾಂಧಿ ಅಲ್ಲಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಪಡುಬಿದ್ರೆ , ಮುಲ್ಕಿ ಹಾಗೂ ಸುರತ್ಕಲ್ ನಲ್ಲಿ ಸ್ಟೇಜ್ ಸಿದ್ದಗೊಳಿಸಲಾಗಿದೆ.
In Pics: ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಂಗಾರಗೊಂಡ ಮಂಗಳೂರು
ಈ ನಡುವೆ ಸುರತ್ಕಲ್ ನಲ್ಲಿ ನಡೆಯುವ ರಾಹುಲ್ ಗಾಂಧಿ ರೋಡ್ ಶೋ ಹಾಗು ಸಭಾ ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ .ಸುರತ್ಕಲ್ ಜಂಕ್ಷನ್ ನಲ್ಲಿ ರಸ್ತೆ ಬದಿ ವೇದಿಕೆ ಹಾಕಿರೋದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಕಾರ್ಯಕ್ರಮದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಳ್ಳಲಿದೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ದೂರಿದ್ದಾರೆ.

ಈ ಹಿಂದೆ ಸುರತ್ಕಲ್ ನಲ್ಲಿ ಬಿಜೆಪಿ ಕಾರ್ಯಕ್ರಮಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಕಾಂಗ್ರೆಸ್ ಸಭೆಗೆ ಸುರತ್ಕಲ್ ನಲ್ಲಿ ಅವಕಾಶ ನೀಡಿರೋದನ್ನು ಖಂಡಿಸಿರುವ ಬಿಜೆಪಿ, ಪೊಲೀಸ್ ಇಲಾಖೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಸುರತ್ಕಲ್ ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್ ಮಂಗಳೂರು ಡಿಸಿಪಿ ಜೊತೆ ಫೋನ್ ನಲ್ಲಿ ವಾಗ್ವಾದ ನಡೆಸಿದ್ದು ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟರೆ ಮುಂಬರುವ ದಿನಗಳಲ್ಲಿ ಬಿಜೆಪಿಗೂ ಕಾರ್ಯಕ್ರಮ ಆಯೋಜಿಸಲು ಅವಕಾಶ ಕೊಡಬೇಕೆಂದು ಒತ್ತಾಯಿಸಿದ್ದಾರೆ.











Click it and Unblock the Notifications