ಕ್ಷೇತ್ರದಲ್ಲಿ ಕಾಂಗ್ರೆಸ್ ಹಸ್ತಕ್ಷೇಪ: ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ನಾಯಕರ ಧರಣಿ
ಮಂಗಳೂರು, ಆಗಸ್ಟ್ 14: ಕಾಂಗ್ರೆಸ್ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಸಕರ ಹಕ್ಕುಚ್ಯುತಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಮಂಗಳೂರಿನಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಮೂಡಬಿದಿರೆಯ ಇರುವೈಲ್ ಗ್ರಾಪಂ ಕಟ್ಟಡ ಉದ್ಘಾಟನೆಗೆ ಡಿಸಿ ಕಚೇರಿಯ ಪ್ರೊಟೋಕಾಲ್ ಪ್ರಕಾರ ಆಮಂತ್ರಣ ಪತ್ರಿಕೆ ಅಚ್ಚಾಗಿದ್ದರೂ ಕಾರ್ಯಕ್ರಮ ರದ್ದು ಮಾಡಲಾಗಿದೆ. ಅಲ್ಲದೆ ಈ ವಿಚಾರಕ್ಕೆ ಮೂಡುಬಿದಿರೆ ಇಒ ಮತ್ತು ಪಿಡಿಒರನ್ನು ಅಮಾನತು ಮಾಡಲಾಗಿದೆ.

ಅದೇ ರೀತಿ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಪಂ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆಗೆ ಶಿಷ್ಟಾಚಾರ ಪ್ರಕಾರ ಆಮಂತ್ರಣ ಮುದ್ರಣವಾಗಿತ್ತು. ಆದರೆ ಆಗಸ್ಟ್ 3ರಂದು ಪಿಡಿಒ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಮೂಲಕ ಬಿಜೆಪಿ ಶಾಸಕರನ್ನು ಕಡೆಗಣಿಸಿ ಕಾಂಗ್ರೆಸ್ ಪದಾಧಿಕಾರಿಗಳು ದರ್ಪ ಮೆರೆಯುತ್ತಾರೆ. ತಮ್ಮ ಮಾತು ಕೇಳದಿದ್ದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್, ವರ್ಗಾವಣೆ ಮಾಡಿ ಬೆದರಿಸುತ್ತಾರೆ. ಆದ್ದರಿಂದ ಅಮಾನತ್ತು ಆಗಿರುವ ಅಧಿಕಾರಿಗಳನ್ನು ತಕ್ಷಣ ನೇಮಕ ಮಾಡಬೇಕು ಇಲ್ಲದಿದ್ದಲ್ಲಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಜೊತೆಗೆ ಕಾಂಗ್ರೆಸ್ ಪಕ್ಷದ ಸೋತ ಅಭ್ಯರ್ಥಿ ಮಿಥುನ್ ರೈಯವರು ಡೇಟಾ ಆಪರೇಟರ್ ಅನ್ನು ಮುಲ್ಕಿಯಿಂದ ಮೂಡುಬಿದಿರೆಗೆ ವರ್ಗಾವಣೆಗೆ ಡಿಸಿಯವರಿಗೆ ಪತ್ರ ಬರೆಯುತ್ತಾರೆ. ಅವರು ಹೇಳಿದಂತೆ ಡಿಸಿಯವರು ವರ್ಗಾವಣೆ ಮಾಡಲು ತಹಶೀಲ್ದಾರ್ ಅವರಿಗೆ ಪತ್ರದಲ್ಲಿ ಸೂಚನೆ ನೀಡುತ್ತಾರೆ. ಹಳೆಯಂಗಡಿ ಗ್ರಾಮ ಪಂಚಾಯತ್‌ನಲ್ಲಿ ಮಧ್ಯಾಹ್ನ ಆಗಬೇಕಿದ್ದ ಚುನಾವಣೆಯನ್ನು ನಡೆಸಲು ಬಿಡದೆ ಸಂಜೆ ಆರು ಗಂಟೆಯ ಬಳಿಕ ಚುನಾವಣೆ ನಡೆದಿದೆ. ಇಲ್ಲಿ ಸರಕಾರ ಆಡಳಿತ ನಡೆಸುತ್ತಿಲ್ಲ ಬದಲಾಗಿ ಪಕ್ಷ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಬಳಿಕ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಶಾಸಕರ ಅಹವಾಲನ್ನು ಆಲಿಸಿದರು. ಈ ವೇಳೆ ಬಿಜೆಪಿ ಶಾಸಕರು ಜಿಲ್ಲಾಧಿಕಾರಿಯವರೊಂದಿಗೆ ವಾಗ್ವಾದ ನಡೆದಿದ್ದು, ಬಳಿಕ ಡಿಸಿಯವರು ಅಮಾನತು ಆಗಿರುವ ಇಬ್ಬರನ್ನು ಮರುನೇಮಕ ಮಾಡಲು ಸರಕಾರಕ್ಕೆ ಮನವಿ ಮಾಡಿದ್ದೇನೆ. ಅದರಂತೆ ಇಂದು ಅವರು ಮರು ನೇಮಕ ಆಗುವ ಸಾಧ್ಯತೆಯಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪ್ರೊಟೊಕಾಲ್ ಪ್ರಕಾರವೇ ಮಾಡುತ್ತೇವೆ ಎಂದು ಹೇಳಿದರು. ಆದ್ದರಿಂದ ಶಾಸಕರು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಭಾಗವಹಿಸಿದರು.
ಪ್ರತಿಭಟನೆಯ ಬಳಿಕ ಮಾತನಾಡಿದ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 'ಪಕ್ಷದ ತುಂಡು ನಾಯಕರ ಮಾತನ್ನು ಕೇಳಿ ವಿರೋಧ ಪಕ್ಷದ ಶಾಸಕರ ಹಕ್ಕುಚ್ಯುತಿ ಮಾಡುವ ಕಾರ್ಯವನ್ನು ರಾಜ್ಯ ಸರಕಾರ ಅಧಿಕಾರಿಗಳ ಮುಖೇನ ಮಾಡುತ್ತಿದೆ. ಇಂತಹ ಎರಡು ಮೂರು ಘಟನೆಗಳು ದ.ಕ.ಜಿಲ್ಲೆಯಲ್ಲಿ ನಡೆದಿದೆ. ಸರಕಾರ ಗೂಂಡಾಗಿರಿಯ ಪ್ರವೃತ್ತಿ ನಡೆಸುತ್ತಿದೆ. ಅಧಿಕಾರಿಗಳ ಮೂಲಕ ಶಾಸಕರ ಹಕ್ಕುಚ್ಯುತಿ ಮಾಡಿ ಶಾಸಕರಿಗೇ ಮರ್ಯಾದೆ ನೀಡದಿರುವ ಈ ಸರಕಾರ ಜನಸಾಮಾನ್ಯರಿಗೆ ಮರ್ಯಾದೆ ಕೊಡುತ್ತದೆಯೇ' ಎಂದು ಪ್ರಶ್ನಿಸಿದರು.
'ದ.ಕ.ಜಿಲ್ಲೆಯ ಬಿಜೆಪಿಯ ಆರೂ ಶಾಸಕರ ಕ್ಷೇತ್ರದಲ್ಲಿ ಹಸ್ತಕ್ಷೇಪಗಳಾಗಿವೆ. ಸಿಎಂ ಅವರು ನಡೆಸಿದ್ದ ಕೆಡಿಪಿ ಸಭೆಯಲ್ಲಿ ಶಾಸಕರ ಹಕ್ಕುಚ್ಯುತಿ ಬಗ್ಗೆ ಶಾಸಕ ಉಮಾನಾಥ ಕೋಟ್ಯಾನ್ ದೂರಿದ್ದರು. ಈ ಸಂದರ್ಭ ಸಿಎಂ ಸಿದ್ದರಾಮಯ್ಯನವರು ಯಾಕೆ ಇದು ಆಗಿದೆ ಎಂದು ಹೇಳಿ ಯಾವ ಶಾಸಕರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಆ ಬಳಿಕ ಹಿಂದಿನ ಬಾಗಿಲಿನಿಂದ ತಮ್ಮ ಆಟವನ್ನು ಆಡಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಇಂದಿನವರೆಗೆ ಸಸ್ಪೆಂಡ್ ಆಗಿರುವ ಅಧಿಕಾರಿಗಳನ್ನು ವಾಪಸ್ ತೆಗೆದುಕೊಳ್ಳುವ ಕೆಲಸ ಆಗಿಲ್ಲ. ಆದ್ದರಿಂದ ಸಿಎಂಗೆ ಮನವಿ ಮಾಡಿದರೂ ನ್ಯಾಯ ಸಿಗದ ಕಾರಣ ಬಿಜೆಪಿ ಶಾಸಕರು ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಜಿಲ್ಲಾಧಿಕಾರಿಯವರು ಎಲ್ಲವನ್ನೂ ಸರಿಪಡಿಸುತ್ತೇನೆಂದು ಭರವಸೆ ಮಾಡಿದ್ದಾರೆ. ಅವರ ಭರವಸೆ ಮೇರೆಗೆ ಪ್ರತಿಭಟನೆ ಮೊಟಕುಗೊಳಿಸಲಾಗುತ್ತದೆ. ಅವರು ನೀಡಿದ ಭರವಸೆ ಈಡೇರದಿದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ಯೋಚನೆ ಮಾಡಲಾಗುತ್ತದೆ. ಇದು ಸರ್ಕಾರಕ್ಕೆ ಮೊದಲ ಎಚ್ಚರಿಕೆ, ಇನ್ನೂ ಸರಿಯಾಗದಿದ್ದಲ್ಲಿ ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ' ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications