ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು;ರಾಜ್ಯಾಧ್ಯಕ್ಷರ ಚುಕ್ಕಾಣಿಯಲ್ಲಿ ಭರ್ಜರಿ ಗೆಲುವು ಕಂಡ ಬಿಜೆಪಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 14: ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಡೆದ ಮೊದಲ ಚುನಾವಣೆಯಲ್ಲಿಯೇ ತಮ್ಮ ಕಾರ್ಯದಕ್ಷತೆಯನ್ನು ಸಾಬೀತು ಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರಿನ ಚುನಾವಣೆಯಲ್ಲಿ ಬಿಜೆಪಿಯನ್ನು ಭರ್ಜರಿಯಾಗಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್ ‍ಗಳ ಪೈಕಿ 44 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ.

 ಕುತೂಹಲ ಕೆರಳಿಸಿದ್ದ ಫಲಿತಾಂಶ

ಕುತೂಹಲ ಕೆರಳಿಸಿದ್ದ ಫಲಿತಾಂಶ

ಭಾರೀ ಕುತೂಹಲ ಕೆರಳಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನಳಿನ್ ಕುಮಾರ್ ಮಾರ್ಗದರ್ಶನದಲ್ಲಿ ಅತಿದೊಡ್ಡ ಗೆಲುವು ದಾಖಲಿಸುವ ಮೂಲಕ ಕೈಪಾಳಯಕ್ಕೆ ಆಘಾತ ನೀಡಿದೆ.

14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ

 ಇದೇ ಮೊದಲ ಬಾರಿ ಬಿಜೆಪಿ ಬಹುಮತ

ಇದೇ ಮೊದಲ ಬಾರಿ ಬಿಜೆಪಿ ಬಹುಮತ

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್ ‍ಗಳ ಪೈಕಿ 44 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದೆ. ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಈ ಇತಿಹಾಸ ಸೃಷ್ಟಿಯಾಗಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಪಾಲಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಬಹುಮತ ಪಡೆದಿದೆ. ಮಂಗಳೂರು ಪಾಲಿಕೆಯಲ್ಲೇ ಇದು ಐತಿಹಾಸಿಕ ಗೆಲುವಾಗಿದ್ದು ನಳಿನ್ ಕುಮಾರ್ ಕಾರ್ಯಕರ್ತರ ಜೊತೆ ನಿಂತು ಶ್ರಮವಹಿಸಿ ದುಡಿದ ಪರಿಣಾಮ ಈ ಗೆಲುವು ಸಾಧ್ಯವಾಗಿದೆ ಎನ್ನುತ್ತಿದ್ದಾರೆ ಗೆದ್ದ ಅಭ್ಯರ್ಥಿಗಳು.

 ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಯಭೇರಿ

ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಯಭೇರಿ

ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಮುಂದುವರಿದ ಬಿಜೆಪಿ, ಶಾಸಕ ‌ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿಯ ಕ್ರಿಯಾಶೀಲ ಅಭಿವೃದ್ಧಿಗೆ ಇಂದು ಮತದಾರರು ಬಿಜೆಪಿಯನ್ನು ಗೆಲ್ಲಿಸಿಕೊಡುವ ಮೂಲಕ ಸಾಕ್ಷಿಯಾಗಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಯಭೇರಿ ಬಾರಿಸಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿದ್ದರೂ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಈ ಮೂಲಕ ಕಾಂಗ್ರೆಸ್ಸಿಗೆ ಭಾರೀ ಮುಖಭಂಗವಾಗಿದ್ದು, ಕೇವಲ 14 ವಾರ್ಡ್ ‍ಗಳನ್ನು ಗೆದ್ದಿದೆ.

ಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಖಾತೆ ತೆರೆದ ಕಮಲಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಖಾತೆ ತೆರೆದ ಕಮಲ

 ಎಸ್ ಡಿಪಿಐಗೆ ಎರಡು ಸ್ಥಾನ

ಎಸ್ ಡಿಪಿಐಗೆ ಎರಡು ಸ್ಥಾನ

ಜೊತೆಗೆ ಎಸ್ ಡಿಪಿಐ 2 ಸ್ಥಾನವನ್ನ ತನ್ನದಾಗಿಸಿಕೊಂಡಿದೆ. ಬಿಜೆಪಿ ಭರ್ಜರಿ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೆಯನ್ನು ಏರಿದೆ. ಬಹುಮತ ಸಾಧಿಸಿದ್ದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರುಗಳ ಸಂಭ್ರಮ ಮನೆಮಾಡಿದೆ. ಒಟ್ಟು 60 ವಾರ್ಡ್ ‍ಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14, ಜೆಡಿಎಸ್ ಶೂನ್ಯ ಹಾಗೂ ಎಸ್ ಡಿಪಿಐ 2 ಸ್ಥಾನಗಳನ್ನು ಪಡೆದುಕೊಂಡಿವೆ.

English summary
BJP President Nalin Kumar Kateel has shocked the Congress by winning the BJP in the election, proving his performance in the first election after he became state president of bjp,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X