ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಮುಖರ ಸಭೆ

ಮಂಗಳೂರು, ಅಕ್ಟೋಬರ್ 1: ಕೇರಳದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೇರಳ ಬಿಜೆಪಿ ಅಕ್ಟೋಬರ್ 3, 4 ಮತ್ತು 5 ರಂದು ಜನರಕ್ಷಾಯಾತ್ರೆ ಹಮ್ಮಿಕೊಂಡಿದೆ.

ಕೇರಳದ ಕಣ್ಣೂರಿನಿಂದ ತಿರುವನಂತಪುರಂವರೆಗೆ ನಡೆಯುವ ಈ ಜನರಕ್ಷಾಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.

BJP National President Amith Shah visits to Mangaluru on Oct 4

ಅಕ್ಟೋಬರ್ 3 ರಂದು ಆಯೋಜಿಸಿರುವ ಜನರಕ್ಷಾಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಇದರ ಹಿಂದಿನ ದಿನ ಅಂದರೆ ಅಕ್ಟೋಬರ್ 2 ರಂದು ಅಮಿತ್ ಶಾ ಮಂಗಳೂರಿಗೆ ಆಗಮಿಸಲಿದ್ದಾರೆ. ಅಕ್ಟೋಬರ್ 2 ರಂದು ಮದ್ಯಾಹ್ನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಶಾ ನಂತರ ನೇರವಾಗಿ ಕೇರಳಕ್ಕೆ ತೆರಳಲಿದ್ದಾರೆ.

ಮಂಗಳೂರಿನಲ್ಲಿ ಅಮಿತ್ ಶಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಕ್ಟೋಬರ್ 3 ರಂದು ಕಣ್ಣೂರಿನಲ್ಲಿ ಜನರಕ್ಷಾ ಯಾತ್ರೆಯಲ್ಲಿ ಭಾಗವಹಿಸಿ ಸಂಜೆ ಮಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 4 ರಂದು ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಹಾಗು ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಂತರ ಸಂಜೆ ಮಂಗಳೂರಿನ ಟಿ.ಎಂ.ಎ ಪೈ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖರೊಂದಿಗೆ ಅಮಿತ್ ಶಾ ಸಂವಾದ ನಡೆಸಲಿದ್ದಾರೆ. ಅಕ್ಟೋಬರ್ 4 ರಂದು ಮಂಗಳೂರಿನಲ್ಲಿಯೇ ತಂಗಲಿರುವ ಅಮಿತ್ ಶಾ ಅಕ್ಟೋಬರ್ 5 ರಂದು ಮುಂಜಾನೆ ಮಂಗಳೂರಿನಿಂದ ತೆರಳಲಿದ್ದಾರೆ ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+