ಬಿಜೆಪಿಗೆ ಬಿಎಸ್‌ವೈ ಆತ್ಮ, ಶೆಟ್ಟರ್ ಕಣ್ಣು: ನಳಿನ್ ಕುಮಾರ್ ಕಟೀಲ್
ಮಂಗಳೂರು, ಜುಲೈ 19: ಭಾರತೀಯ ಜನತಾ ಪಕ್ಷ (ಬಿ.ಜೆ.ಪಿ) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ ಇಲ್ಲ ಎಂದು ಸ್ಪಷ್ಟಪಡಿಸಿರುವ ನಳಿನ್ ಕುಮಾರ್ ಕಟೀಲ್, ''ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರಿತೇನೆ. ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ,'' ಎಂದಿದ್ದಾರೆ.
''ಅಲ್ಲದೇ ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ,'' ಅಂತಾ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

''ಆಡಿಯೋ ಬಗ್ಗೆ ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದ್ದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ.ಇವತ್ತು ಅಧಿವೇಶನಕ್ಕೆ ಹೋಗ್ತಾ ಇದ್ದೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ,'' ಅಂತಾ ನಳಿನ್ ಕುಮಾರ್ ಕಟೀಲ್ ಹೇಳಿದರು.












Click it and Unblock the Notifications