ಮಂಗಳೂರಲ್ಲಿ ಜಲಯುದ್ಧ, ಮೇಯರ್ ವಿರುದ್ಧ ಬಿಜೆಪಿ ಪ್ರತಿಭಟನೆ
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಮೇಯರ್ ಕವಿತಾ ಸನಿಲ್ ವಿಫಲರಾಗಿದ್ದಾರೆ. ತಮಗೆ ಬೇಕಾದಂತೆ ನೀರು ಪೂರೈಕೆ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರು, ಏಪ್ರಿಲ್ 6: ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಮೇಯರ್ ಕವಿತಾ ಸನಿಲ್ ವಿಫಲರಾಗಿದ್ದಾರೆ. ತಮಗೆ ಬೇಕಾದಂತೆ ನೀರು ಪೂರೈಕೆ ಮಾಡುವ ಮೂಲಕ ಮೇಯರ್ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರ ಬಿಜೆಪಿ ಸಮಿತಿ ಇಂದು ನಗರದ ಆರ್‌ಟಿಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ತುಂಬೆ ವೆಂಟೆಡ್ ಡ್ಯಾಂನಲ್ಲಿ ಸಾಕಷ್ಟು ನೀರಿದ್ದರೂ ಮೇಯರ್ ಕವಿತಾ ಸನಿಲ್ ರವರು ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಧೋರಣೆಯಿಂದ ನಗರದ ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾರೂಢ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನೀರಿಗೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.[ಮಂಗಳೂರು: ನೀರಿನ ಟ್ಯಾಂಕಲ್ಲಿ ಸತ್ತ ಹೆಬ್ಬಾವು ಕಂಡು ಬೆಚ್ಚಿ ಬಿದ್ದ ಜನ.!]

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡರುಗಳು ಹಾಗೂ ಕಾರ್ಪೋರೇಟರ್ ಗಳು ಪಾಲ್ಗೊಂಡಿದ್ದರು.[ಮಂಗಳೂರು: ಮೇಯರ್ ಮೇಡಂ, ಜಾಹೀರಾತು ಫಲಕ ತೆರವುಗೊಳಿಸುವುದು ಯಾವಾಗ?]












Click it and Unblock the Notifications