ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ: ಇತಿಹಾಸ ನಿರ್ಮಿಸಿದ ಬಿಜೆಪಿ
ಮಂಗಳೂರು, ಅಕ್ಟೋಬರ್. 31: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ತನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ್ದು, ಅಧಿಕಾರದ ಗದ್ದುಗೆ ಏರಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಈ ವರೆಗಿನ ಕಾಂಗ್ರೆಸ್ ಪ್ರಾಬಲ್ಯ ಮುರಿದ ಬಿಜೆಪಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲೂ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಹರೀಶ್ ಪೂಂಜಾ ಅವರಿಗೆ ಈ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ಈಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಬಿಜೆಪಿ ಇತಿಹಾಸ ನಿರ್ಮಿಸಿದೆ.

ಪಟ್ಟಣ ಪಂಚಾಯತ್ ನ ಒಟ್ಟು 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 7 ಸ್ಥಾನ ಗಳಿಸಿಕೊಂಡರೆ ಕಾಂಗ್ರೆಸ್ ಕೇವಲ 4 ಸ್ಥಾನಗಳಿಗೆ ತೃಪ್ತಿ ಪಡಬೇಕಾಯಿತು. ಈ ಮೂಲಕ ಶಾಸಕ ಹರೀಶ್ ಪೂಂಜಾ ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.












Click it and Unblock the Notifications