Mangaluru Murder: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ: ನಾಲ್ವರ ಬಂಧನ
ಮಂಗಳೂರು, ಏಪ್ರಿಲ್. 19: ಮಂಗಳೂರಿನ ನೆಹರೂ ಮೈದಾನದ ಬಳಿಯ ಫುಟ್‌ಬಾಲ್ ಮೈದಾನದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು 45 ವರ್ಷದ ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬರಿಂಜ ಎಂದು ಗುರುತಿಸಲಾಗಿದೆ. ಆತನನ್ನು ಮಂಗಳೂರಿನಲ್ಲಿ ಕೊಲೆ ಮಾಡಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜನಾರ್ದನ ಬರಿಂಜ ನೆಹರೂ ಮೈದಾನದಲ್ಲಿ ಕುಳಿತಿದ್ದಾಗಲೇ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈವರೆಗೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ದರೋಡೆ ಮಾಡಲು ಬಂದವರೇ ಜನಾರ್ದನ ಬರಿಂಜ ಅವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಜನಾರ್ದನ ಬರಿಂಜ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತಿದ್ದರು ಎನ್ನಲಾಗಿದೆ.
ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಡಿಸಿಪಿ ಪ್ರಕಾರ ಅವಘಡ ಸಂಭವಿಸಿದ ಸ್ಥಳ ಹಗಲಿನಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಆದರೂ ಹತ್ಯೆ ನಡೆದಿರುವ ಬಗ್ಗೆ ಆಶ್ಚರ್ಯ ಸೂಚಿಸಿದ್ದಾರೆ. ಇನ್ನು, ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಶಂಕಿತರನ್ನು ಗುರುತಿಸಲು ಮತ್ತು ಮತ್ತಷ್ಟು ಮಂದಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.
ಇನ್ನೊಂದು ಘಟನೆಯಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮನೆ ಒಡೆದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ರಾಜ್ಯಾದ್ಯಂತ ಸುಮಾರು 13 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ 2006 ರಿಂದ ತಲೆಮರೆಸಿಕೊಂಡಿದ್ದನು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.












Click it and Unblock the Notifications