ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಪಾಲಿಕೆ ಚುನಾವಣೆಗೆ ತಾಲೀಮು ಆರಂಭಿಸಿದ ಬಿಜೆಪಿ

|
Google Oneindia Kannada News

ಮಂಗಳೂರು, ಮೇ 21: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಬಹಮತ ಸಾಬೀತು ಪಡಿಸದೆ ಪತನಗೊಂಡಿದೆ. ಈ ನಿರಾಶೆಯ ನಡುವೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತೊಂದು ಚುನಾವಣೆಗೆ ಸಿದ್ದರಾಗುತ್ತಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೊರೆತ ಫಲಿತಾಂಶ ದಿಂದ ನವೋಲ್ಲಾಸಲ್ಲಿರುವ ಬಿಜೆಪಿ ಕಾರ್ಯಕರ್ತರು ಮಂಗಳೂರು ಮಹಾ ನಗರ ಪಾಲಿಕೆ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ.

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಪಾಲಿಕೆ ವ್ಯಾಪ್ತಿಬರುವ ಎರಡು ವಿಧಾನಸಭೆ ಕ್ಷೇತ್ರಗಳಾದ ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದೆ. ಮಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಪಾಲಿಕೆಯ 22 ವಾರ್ಡ್ ಗಳು ಹಾಗು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಲಿಕೆಯ 38 ವಾರ್ಡ್ ಗಳು ಸೇರಿವೆ.

BJP workers prepairing for upcoming Mangaluru corporation elections

60 ಸ್ಥಾನಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಗೆ 2013 ರ ಮಾರ್ಚ್ 7 ರಂದು ಚುನಾವಣೆ ನಡೆದಿತ್ತು. ಅಂದು ನಡೆದ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಅದಿಕಾರದಲ್ಲಿತ್ತು. ಆದರೆ ಚುನಾವಣೆಯಲ್ಲಿ 35 ಸ್ಥಾನಗಳನ್ನು ಗೆಲ್ಲುವ ಮೂಲಕ ಮಂಗಳೂರು ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಕೈ ವಶ ಮಾಡಿಕೊಂಡಿತ್ತು.

2013ರಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 20 ಹಾಗು ಜೆಡಿಎಸ್ 2 , ಸಿಪಿಐ, ಎಸ್ ಡಿಪಿಐ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದರು.

English summary
After BJP swept the assembly election by winning 7 seats out of 8 in Dakshina Kannada district, now BJP workers are preparing for upcoming Mangaluru city corporation elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X