Breaking:ಪ್ರವೀಣ್ ಹತ್ಯೆಯಲ್ಲಿ ಇಬ್ಬರ ಬಂಧನ- ದಕ್ಷಿಣ ಕನ್ನಡ ಎಸ್‌ಪಿ
ಮಂಗಳೂರು, ಜುಲೈ 28: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಇಬ್ಬರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದರು.
"ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದುವರೆಗೆ 15 ಮಂದಿಯನ್ನು ವಿಚಾರಣೆಗೊಳಪಡಿಸಿದ್ದು, ಈ ಪೈಕಿ 2 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಜಾಕಿರ್ ಮತ್ತು ಶಫಿ ಎಂದು ಗುರುತಿಸಲಾಗಿದೆ. ಇದರಲ್ಲಿ ಜಾಕಿರ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ಸಹ ಬೆಳ್ಳಾರೆ ಗ್ರಾಮದವರರೇ ಆಗಿದ್ದಾರೆ. ಘಟನೆಗೆ ಕೇರಳ ನೋಂದಣಿ ವಾಹನ ಬಳಸಿರುವ ಸಾಧ್ಯತೆಯಿದೆ" ಎಂದು ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದರು.

'ಬಂಧಿತರಿಗಿರುವ ಎಲ್ಲಾ ನಂಟುಗಳ ಬಗ್ಗೆಯೂ ತನಖೆ ಮಾಡಲಾಗುವುದು. ಆರೋಪಿಗಳಿಗೆ ಯಾವ ಸಂಘಟನೆಗಳ ಜೊತೆಗೆ ಸಂಬಂಧವಿಟ್ಟುಕೊಂಡಿದ್ದಾರೆ ಎಂಬುದನ್ನು ತಿಳಿಯಲಾಗುತ್ತದೆ. ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಪ್ರವೀಣ್ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದೆ. ಮಂಗಳವಾರ ರಾತ್ರಿ ಬೆಳ್ಳಾರೆಯಲ್ಲಿ ನಿಂತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದೆ. ಘಟನೆಯ ಬೆನ್ನಲ್ಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.












Click it and Unblock the Notifications