Breaking: ಸೆಕ್ಷನ್ 144 ಜಾರಿ ಹಿನ್ನೆಲೆ ಸ್ತಬ್ಧವಾದ ಸುಳ್ಯದ ಬೆಳ್ಳಾರೆ

ಮಂಗಳೂರು, ಜುಲೈ 28: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಇಂದು ಸಂಪೂರ್ಣ ಸ್ತಬ್ಧವಾಗಿದೆ.

ಬೆಳ್ಳಾರೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಜನ ಸಂಚಾರ ಅತೀ ವಿರಳವಾಗಿದೆ. ಪ್ರತಿ ಅಂಗಡಿಗಳ ಬಾಗಿಲಿಗೂ ಬೀಗ ಹಾಕಲಾಗಿದೆ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನುವ ವಾತಾವರಣ ಕಾಣಿಸುತ್ತಿದೆ.

ಜುಲೈ 26 ರಂದು ಮಂಗಳವಾರ ರಾತ್ರಿ ಬೆಳ್ಳಾರೆಯಲ್ಲಿ ನಿಂತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಹತ್ಯೆ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ. ಹತ್ಯೆ ನಂತರ ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ನಡೆದ ಅಹಿತಕರ ಘಟನೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಸೆಕ್ಷನ್‌ 144 ಜಾರಿ ಮಾಡಿ ಪುತ್ತೂರು ವಿಭಾಗಾಧಿಕಾರಿ ಗಿರೀಶ್‌ ನಂದನ್‌ ಆದೇಶ ಹೊರಡಿಸಿದ್ದಾರೆ.

BJP youth leader murder: section 144 imposed, seems to be situation is under control

ಗುರುವಾರ ಬೆಳಗ್ಗೆಯಿಂದ ಇಡೀ ನಗರವೇ ಖಾಲಿಯಾದಂತ ಚಿತ್ರಣ ಕಾಣುತ್ತಿದೆ. ಪುತ್ತೂರಿನ ಎರಡು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಡಬ, ಬೆಳ್ಳಾರೆ ಪೇಟೆಗಳು ಸಂಪೂರ್ಣ ಬಂದ್ ಮಾಡಲಾಗಿದ್ದು, ಕಡಬದಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರವೀಣ್‌ ಹತ್ಯೆಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭಗವಾನ್ ಸೋನಾವಣೆ ಮಾಹಿತಿ ನೀಡಿದ್ದಾರೆ.

BJP youth leader murder: section 144 imposed, seems to be situation is under control

ಇನ್ನು, ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಮತ್ತು ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಆಗಿರುವದರ ನೆನಪಿಗೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ 'ಜನೋತ್ಸವ' ಹೆಸರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಕಾರ್ಯಕ್ರಮಕ್ಕೆ ಬರಲು ಸಿದ್ಧವಾಗಿದ್ದರು. ಆದರೆ, ಬುಧವಾರ ತಡರಾತ್ರಿ ಮಾಧ್ಯಮಗೋಷ್ಠಿ ನಡೆಸಿರುವ ಬಸವರಾಜ ಬೊಮ್ಮಾಯಿ 'ಜನೋತ್ಸವ' ರದ್ದು ಮಾಡಿರುವುದಾಗಿ ಘೋಷಿಸಿದ್ದಾರೆ. ಜನೋತ್ಸವ ರದ್ದು ಮಾಡಲು ಯಾವುದೇ ಒತ್ತಡ ಇಲ್ಲ. ಆದರೆ, ನನ್ನ ಮನಸಾಕ್ಷಿ ಒಪ್ಪುತ್ತಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+