Bomb Threat: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು ಮೇ 4: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಪ್ರಯಾಣಿಕರಲ್ಲಿ ಭೀತಿ ಹುಟ್ಟಿಸಿದೆ.
ಬೆಂಗಳೂರಿನ ಪ್ರತಿಷ್ಠಿತ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಬಳಿಕ ಹಲವಾರು ಶಾಲೆಗಳಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಆದರೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು ವಿಮಾನ ನಿಲ್ದಾಣದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ. ಏಪ್ರಿಲ್ 29ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
'ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ' ಎಂದು ಸಂದೇಶದಲ್ಲಿ ಬರೆಯಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಮಾನ ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.

ಅನುಮಾನ ಬಂದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂದೇಶ ಬಂದ ಬಳಿಕ ವಿಮಾನ ನಿಲ್ದಾಣ ಸೇರಿದಂತೆ ಒಳಬರುವ ಹಾಗೂ ಹೊರ ಹೋಗುವ ವಿಮಾನಗಳನ್ನು ಸೂಕ್ಷ್ಮವಾಗಿ ತಪಾಸಣೆ ಮಾಡಲಾಗುತ್ತಿದೆ.












Click it and Unblock the Notifications